ವೇತನ ಹೆಚ್ಚಿಸಲು ಆಶಾ ಕಾರ್ಯಕರ್ತರ ಆಗ್ರಹ

ವೇತನ ಹೆಚ್ಚಿಸುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹನೂರಿನಲ್ಲಿ ತಹಸೀಲ್ದಾರ್ ಕೆ.ಎನ್.ಚೈತ್ರಾ ಅವರ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು. ಸುಜಾತಾ, ಶಶಿಕಲಾ, ಸುನೀತಾ ಇತರರಿದ್ದರು.
ವೇತನ ಹೆಚ್ಚಿಸುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹನೂರಿನಲ್ಲಿ ತಹಸೀಲ್ದಾರ್ ಕೆ.ಎನ್.ಚೈತ್ರಾ ಅವರ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು. ಸುಜಾತಾ, ಶಶಿಕಲಾ, ಸುನೀತಾ ಇತರರಿದ್ದರು.
Published on
ಹನೂರು: ಸರ್ಕಾರ ನೀಡಿದ್ದ ಭರವಸೆಯಂತೆ ವೇತನ ಹೆಚ್ಚಿಸುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಆಶಾ ಕಾರ್ಯಕರ್ತೆಯರು ತಹಸೀಲ್ದಾರ್ ಕೆ.ಎನ್.ಚೈತ್ರಾ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಆಶಾ ಕಾರ್ಯಕರ್ತರ ಸಂಘದ ತಾಲೂಕು ಅಧ್ಯಕ್ಷೆ ಸುಜಾತಾ ಮಾತನಾಡಿ, ಆಶಾ ಕಾರ್ಯಕರ್ತರು ಹಲವು ವರ್ಷಗಳಿಂದಲೂ ಕಡಿಮೆ ವೇತನಕ್ಕೆ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಇದರಿಂದ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ವೇತನವನ್ನು ಹೆಚ್ಚಿಸುವಂತೆ ಆಗ್ರಹಿಸಿ ಕಳೆದ ವರ್ಷ ಆಶಾ ಕಾರ್ಯಕರ್ತರು ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗಿತ್ತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇತನ ಹೆಚ್ಚಳ ಹಾಗೂ 5 ಸಾವಿರ ಗೌರವ ಧನವನ್ನು 8 ಸಾವಿರ ರೂ.ಗೆ ಹೆಚ್ಚಿಸುವುದಾಗಿ ಭಸರವೆ ನೀಡಿದ್ದರು. ಆದರೆ ಈವರೆಗೂ ಯಾವುದೇ ಕ್ರಮವಾಗಿಲ್ಲ. ಇದರಿಂದ ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದರೂ ಸಮರ್ಪಕ ವೇತನ ಸಿಗದ ಪರಿಣಾಮ ಜೀವನದಲ್ಲಿ ಸಮಸ್ಯೆ ಎದುರಿಸುವಂತಾಗಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಮನಗಂಡು ಮುಂಬರುವ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತರ ವೇತನವನ್ನು ಹೆಚ್ಚಿಸಬೇಕು. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ 15 ಸಾವಿರ ರೂ. ಗೌರವ ಧನ ನೀಡಬೇಕು. ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಚೇತರಿಕೆಯ 3 ತಿಂಗಳ ಅವಧಿಗೆ ನಿಶ್ಚಿತ ಗೌರವ ಧನ ನೀಡಬೇಕು. ಜತೆಗೆ ಇನ್ನು ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
ಇದಕ್ಕೆ ತಹಸೀಲ್ದಾರ್ ಅವರು ಹಿರಿಯ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿಯನ್ನು ರವಾನಿಸಿ ಅಗತ್ಯ ಕ್ರಮವಹಿಸುವುದಾಗಿ ಭರವಸೆ ನೀಡಿದರು. ಸಂಘದ ಕಾರ್ಯದರ್ಶಿ ಶಶಿಕಲಾ, ಪದಾಧಿಕಾರಿಗಳಾದ ಸರೋಜಾ, ಸುನೀತಾ, ಶಿವಮ್ಮ, ಪ್ರಿಯಾಂಕಾ, ಗೌರಮ್ಮ ಹಾಗೂ ಇನ್ನಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net