ದಿಡ್ಡಿಯಮ್ಮ ದೇಗುಲದಲ್ಲಿ ಆಷಾಢ ಪೂಜೆ

 ಕಣಗಾಲು ಗ್ರಾಮದ ಶ್ರೀ ದಿಡ್ಡಿಯಮ್ಮ ದೇಗುಲದಲ್ಲಿ ಆಯೋಜಿಸಿದ್ದ ವಿಶೇಷ ಪೂಜೆಯಲ್ಲಿ ಶಾಸಕ ಕೆ.ವೆಂಕಟೇಶ್ ಅವರನ್ನು ಸನ್ಮಾನಿಸಲಾಯಿತು.
ಕಣಗಾಲು ಗ್ರಾಮದ ಶ್ರೀ ದಿಡ್ಡಿಯಮ್ಮ ದೇಗುಲದಲ್ಲಿ ಆಯೋಜಿಸಿದ್ದ ವಿಶೇಷ ಪೂಜೆಯಲ್ಲಿ ಶಾಸಕ ಕೆ.ವೆಂಕಟೇಶ್ ಅವರನ್ನು ಸನ್ಮಾನಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಕಣಗಾಲು ಗ್ರಾಮದ ಶ್ರೀ ದಿಡ್ಡಿಯಮ್ಮ ದೇಗುಲ
  • ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ
ಬೆಟ್ಟದಪುರ: ಸಮೀಪದ ಕಣಗಾಲು ಗ್ರಾಮದ ಶ್ರೀ ದಿಡ್ಡಿಯಮ್ಮ ದೇಗುಲದಲ್ಲಿ ಆಷಾಢ ಮಾಸದ ಅಂಗವಾಗಿ ಶುಕ್ರವಾರ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು.
ಶಾಸಕ ಕೆ.ವೆಂಕಟೇಶ್ ಹಾಗೂ ತಾಲೂಕು ಆಶ್ರಯ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಕಣಗಾಲು ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಸುಮಾರು ನಾಲ್ಕು ಕೋಟಿ ರೂ. ಅನುದಾನ ನೀಡಲಾಗಿದೆ. ಮುಂದಿನ ದಿನಗಳಲ್ಲಿಯೂ ಗ್ರಾಮಕ್ಕೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ವೆಂಕಟೇಶ್ ಹೇಳಿದರು.
ದಿಡ್ಡಿಯಮ್ಮ ದೇವಿ ಕೃಪೆಯಿಂದ ಗ್ರಾಮದಲ್ಲಿ ಸುಖ, ಶಾಂತಿ ನೆಲೆಸುವುದರೊಂದಿಗೆ ಸಕಾಲದಲ್ಲಿ ಉತ್ತಮ ಮಳೆಯಾಗಿ ರೈತರಿಗೆ ಸಮೃದ್ಧ ಬೆಳೆ ದೊರೆಯುವಂತಾಗಬೇಕು. ಗ್ರಾಮಸ್ಥರು ಪರಸ್ಪರ ಒಗ್ಗಟ್ಟಿನಿಂದ ಗ್ರಾಮದ ಅಭಿವೃದ್ಧಿಗೆ ಕೈಜೋಡಿಸಬೇಕು. ಗ್ರಾಮದ ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಮತ್ತು ಒಕ್ಕಲಿಗರ ಸಮುದಾಯ ಭವನಕ್ಕೆ ನಿರ್ಮಾಣಕ್ಕೆ ಅನುದಾನ ಕೊಡುವುದಾಗಿ ಭರವಸೆ ನೀಡಿದರು.
ವಿಶೇಷ ಪೂಜೆ ಹಿನ್ನೆಲೆಯಲ್ಲಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಪೂಜೆ ನಂತರ ಆಯೋಜಿಸಿದ್ದ ಅನ್ನಸಂತರ್ಪಣೆಯಲ್ಲಿ ಭಕ್ತರು ಪ್ರಸಾದ ಸ್ವೀಕರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net