ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀವರದರಾಜಸ್ವಾಮಿ ದೇವಸ್ಥಾನದಲ್ಲಿ ಆಷಾಢ ಮಾಸದ ಶುಕ್ರವಾರಗಳಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿದೆ.
ಜು.17, 24, 31 ಹಾಗೂ ಆ.7ರಂದು ಅಮ್ಮನವರಿಗೆ ಅಭಿಷೇಕ ಮಹಾಮಂಗಳಾರತಿ, 14ರಂದು ಮಹಾಲಕ್ಷ್ಮೀ ಜಯಂತಿ, 21ರಂದು ವರಮಹಾಲಕ್ಷ್ಮೀ ವ್ರತದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಶ್ರೀ ಲಕ್ಷ್ಮೀವರದರಾಜ ಸ್ವಾಮಿ ಕೃಪೆಗೆ ಪಾತ್ರರಾಗಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ಕೋರಿದೆ.