Assaulted by boyfriend who had invited her for marriage talks
Published on:
Copied
Follow Us
ಕೋಲಾರ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ನಂತರ ಯುವತಿಯನ್ನು ಮನೆಗೆ ಕರೆಯಿಸಿಕೊಂಡು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸರು 9 ಆರೋಪಿಗಳನ್ನು ಬಂಧಿಸಿದ್ದಾರೆ. ನಾಗನಾಯಕನಹಳ್ಳಿ ಯುವಕ ಶಶಿಕುಮಾರ್ ಪ್ರಮುಖ ಆರೋಪಿಯಾಗಿದ್ದಾನೆ.
ಮುಳಬಾಗಿಲಿನ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿರುವ ಯುವತಿಯನ್ನು ಪ್ರೀತಿಸುತ್ತಿದ್ದ. ನಂತರ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಇಲ್ಲಸಲ್ಲದ ಸಬೂಬು ಹೇಳಿಕೊಂಡೆ ದಿನದೂಡುತ್ತಿದ್ದ, ನೊಂದ ನೊಂದ ಯುವತಿ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇತ್ತೀಚೆಗೆ ಮದುವೆ ಬಗ್ಗೆ ಮಾತಾಡಬೇಕು ಮನೆಗೆ ಬಾ ಎಂದು ತಮ್ಮ ಮನೆಗೆ ಕರೆಯಿಸಿಕೊಂಡಿದ್ದರು. ಅದರಂತೆ ಯುವತಿ ತಮ್ಮ ಸಂಬಂಧಿಯೊಬ್ಬರನ್ನು ಕರೆದುಕೊಂಡು ಯುವಕನ ಮನೆಗೆ ಹೋದಾಗ ಜತೆಗಾರರೊಂದಿಗೆ ಸೇರಿಕೊಂಡು ಯುವತಿ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.