ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಸೂಚನೆಯ ಮೇರೆಗೆ ತಹಸೀಲ್ದಾರ್ ಕೆ.ಮಂಜುನಾಥ್ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಮೃತ ರೈತ ರಮೇಶ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರೊಂದಿಗೆ ಮಾತನಾಡಿ, ಮರಣ ಪ್ರವಾಣ ಪತ್ರವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು. ಇದೇ ವೇಳೆ ಪತ್ನಿಗೆ ವಿಧವಾ ವೇತನ ಮಂಜೂರಾತಿ ಆದೇಶ ಪತ್ರ ನೀಡಿದರು. ಆತ್ಮಹತ್ಯೆ ಪರಿಹಾರ ನಿಧಿಗೆ ಅಗತ್ಯ ದಾಖಲೆ ಸಂಗ್ರಹಿಸಿ, ಸಂಬಂಧಿತ ಅರ್ಜಿಗಳನ್ನು ಸಲ್ಲಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.