ತನ್ಮೂಲಕ ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿನ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ಶಾಲಾ ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನು ಆಯಾ ಜಿಪಂ ಸಿಇಒಗಳು ನಿರ್ವಹಿಸಲಿದ್ದಾರೆ. ಇವರು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಪ್ರಕಾರ ಜಿಲ್ಲಾ ಮಟ್ಟದಲ್ಲಿ ಟೆಂಡರ್‌ಗಳನ್ನು ಕರೆದು ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕು. ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಒಟ್ಟಾರೆ ಕಾಮಗಾರಿಗಳ ಮೇಲ್ವಿಚಾರಣೆಯನ್ನು ನಿರ್ವಹಿಸಲಿದ್ದಾರೆ.