ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಲು ಸೂಚನೆ

ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಡಿಸಿ ಫೌಜಿಯಾ ತರನ್ನುಮ್​, ಹಿರಿಯ ಸಿವಿಲ್​ ನ್ಯಾಯಾಧೀಶ ಶ್ರೀನಿವಾಸ ನವಲೆ, ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಹೆಚ್ಚುವರಿ ಎಸ್ಪಿ ಮಹೇಶ ಮೇಣ್ಣನವರ್​ ಇದ್ದರು.
ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಡಿಸಿ ಫೌಜಿಯಾ ತರನ್ನುಮ್​, ಹಿರಿಯ ಸಿವಿಲ್​ ನ್ಯಾಯಾಧೀಶ ಶ್ರೀನಿವಾಸ ನವಲೆ, ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಹೆಚ್ಚುವರಿ ಎಸ್ಪಿ ಮಹೇಶ ಮೇಣ್ಣನವರ್​ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಾಲ್ಯವಿವಾಹ ಫೋಕ್ಸೋ ಪ್ರಕರಣ
  • ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೇಲ್ವಿಚಾರಣಾ ಸಮಿತಿ ಸಭೆ
ಕಲಬುರಗಿ: ಬಾಲ್ಯವಿವಾಹ, ಮತ್ತು ಫೋಕ್ಸೋ ಪ್ರಕರಣ ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್​ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಟಕ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ಸಹಾಯವಾಣಿ &1098, ಸಲಹಾ ಮಂಡಳಿ, ಮುಖ್ಯಮಂತ್ರಿ ಬಾಲಸೇವಾ ಯೋಜನೆ ಮತ್ತು ಪಿಎಂ ಕೇರ್​ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳು ಹೆಚ್ಚು ಹೆಚ್ಚು ಕುಟುಂಬಗಳಿಗೆ ದತ್ತು ಹೋಗುತ್ತಿರುವುದು ಸಂತಸ ತಂದಿದೆ. 2023ರಲ್ಲಿ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯ ಜೀವಾವಧಿ ಶಿೆ ಹಾಗೂ ಬಾಲ್ಯವಿವಾಹ ಪ್ರಕರಣಗಳಲ್ಲಿ ನ್ಯಾಯಾಲಯವು ಕುಟುಂಬದ 4 ಜನ ಸದಸ್ಯರಿಗೆ ಶಿೆ ವಿಧಿಸಿದೆ. ಇತ್ಯರ್ಥಗೊಂಡ ಪ್ರಕರಣಗಳ ಕುರಿತು ಅಧಿಕಾರಿಗಳು ಜನರಿಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.
ಸಂಬಂಧಿಸಿದ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ಕಚೇರಿ ಅಥವಾ ಮಕ್ಕಳ ವಸತಿ ನಿಲಯಗಳಿಗೆ ಭೇಟಿ ನೀಡುವ ಮಾಹಿತಿ ಮುಂಚಿತವಾಗಿ ತಿಳಿಸದೆ ಭೇಟಿ ನೀಡಿದಾಗ ಮಾತ್ರ ಅಲ್ಲಿಯ ನಿಜಸ್ಥಿತಿ ತಿಳಿಯುತ್ತದೆ. ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೋವಿಡ್​ನಲ್ಲಿ ತಂದೆ, ತಾಯಿ ಕಳೆದುಕೊಂಡಿರುವ ಪಿ.ಎಂ.ಕೇರ್​ ಯೋಜನೆ ಅಡಿ ದಾಖಲಾಗಿರುವ ಮಕ್ಕಳಿಗೆ ಸ್ನೇಹ ಪತ್ರವನ್ನು ಜಿಲ್ಲಾಧಿಕಾರಿಗಳು ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿ.ಮಂಜುಳಾ ಪಾಟೀಲ್​ ಪಿಪಿಟಿ ಮೂಲಕ ಇಲಾಖೆಯ ಮಾಹಿತಿ ನೀಡಿದರು. ಹಿರಿಯ ಸಿವಿಲ್​ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಹೆಚ್ಚುವರಿ ಎಸ್​ಪಿ ಮಹೇಶ ಮೇಣ್ಣನವರ್​, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪ್ರೀತಿ ದೊಡ್ಡಮನಿ, ಡಿಹೆಚ್​ಒ ಡಾ.ಶರಣಬಸಪ್ಪ ಕ್ಯಾತನಾಳ, ಶಿಕ್ಷಣ ಇಲಾಖೆ ಉಪನಿರ್ದೇಶಕಿ ಶಂಕ್ರಮ್ಮ ಡವಳಗಿ ಇತರರಿದ್ದರು.
"

ಬಾಲಗರ್ಭಿಣಿ ಪ್ರಕರಣಗಳಲ್ಲಿ ಆರೋಗ್ಯ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಡ್ಡಾಯವಾಗಿ ಪ್ರಥಮ ವರ್ತಮಾನ ವರದಿ ಮಾಡಬೇಕು. ಕೇವಲ ಹೇಳಿಕೆ ನೀಡದೆ ಸಂಬಂಧಿಸಿದ ಠಾಣೆಗೆ ತೆರಳಿ ವರದಿ ಮಾಡಬೇಕು.

ಬಿ.ಫೌಜಿಯಾ ತರನ್ನುಮ್​,

ಜಿಲ್ಲಾಧಿಕಾರಿ, ಕಲಬುರಗಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net