ಬೆಂಗಳೂರು: ಖತಾಲಸಾಬ ಆಲಗೂರು (ಬೋರಗಿ) ಸ್ಮರಣಾರ್ಥ ನಬಿರೋಶನ್ ಪ್ರಕಾಶನ ವತಿಯಿಂದ ನೀಡುವ ‘ಅಪ್ಪ ರಾಜ್ಯ ಪ್ರಶಸ್ತಿ’ಗೆ ಫ.ಗು. ಹಳಕಟ್ಟಿ ಸಂಸ್ಥೆಯ ಕಾರ್ಯದರ್ಶಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 5 ಸಾವಿರ ರೂ. ನಗದು ಹಾಗೂ ಫಲಕ ಒಳಗೊಂಡಿದೆ. ಡಾ.ಮಹಾಂತೇಶ ಸಮಾಜದಲ್ಲಿ ಸಾಮಾಜಿಕ ಕಳಕಳಿ ಹೊಂದಿರುವ, ಬಡ ಮಕ್ಕಳು ಹಾಗೂ ವಿದ್ಯಾರ್ಥಿಗಳ ಬದುಕಿಗೆ ದಾರಿ ದೀಪವಾಗಿದ್ದಾರೆ. ಪ್ರತಿ ವರ್ಷ ವೃಕ್ಷೋಥಾನ್ ಮೂಲಕ ಲಕ್ಷಾಂತರ ಗಿಡಗಳನ್ನು ನೆಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಬರಹಗಾರ, ಶರಣ ಚಿಂತಕರೂ ಆಗಿರುವ ಇವರ ಸಾಮಾಜಿಕ ಸೇವೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ 21ರಂದು ಆಯೋಜಿಸಲಾಗುವ ಪೊಲೀಸ್ ಕಲಾಸಂಗಮ ಮತ್ತು ಸಾಂಸ್ಕೃತಿಕ ಕಲಾ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮೌಲಾಲಿ ಆಲಗೂರ ತಿಳಿಸಿದ್ದಾರೆ.