ಬಿ.ಆರ್.ಎಲ್ ಹಾಗೂ ನರಸಿಂಹ ನಾಯಕ್ ಗೆ ಪ್ರಶಸ್ತಿ

 ಕವಿ ಕೆ.ಎಸ್. ನರಸಿಂಹಸ್ವಾಮಿ
ಕವಿ ಕೆ.ಎಸ್. ನರಸಿಂಹಸ್ವಾಮಿ
Published on

ಪ್ರಮುಖ ಮುಖ್ಯಾಂಶಗಳು

  • * ಪ್ರಶಸ್ತಿಯು ತಲಾ 25 ಸಾವಿರ ರೂ. ನಗದು ಹಾಗೂ ಫಲಕ ಒಳಗೊಂಡಿದೆ.
  • * ಆ. 1ರಂದು ಸಂಜೆ 5 ಗಂಟೆಗೆ ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಕಾರ್ಯಕ್ರಮ
ಬೆಂಗಳೂರು: ಕವಿ ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ ವತಿಯಿಂದ ನೀಡಲಾಗುವ 2025ನೇ ಸಾಲಿನ ‘ಕೆ.ಎಸ್.ನರಸಿಂಹಸ್ವಾಮಿ ಸಾಹಿತ್ಯ ಪ್ರಶಸ್ತಿ’ಗೆ ಕವಿ ಬಿ.ಆರ್. ಲಕ್ಷ್ಮಣ ರಾವ್ ಹಾಗೂ ‘ಕಾವ್ಯಗಾಯನ ಪ್ರಶಸ್ತಿ’ಗೆ ಗಾಯಕ ಪುತ್ತೂರು ಶ್ರೀ ನರಸಿಂಹ ನಾಯಕ್ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ತಲಾ 25 ಸಾವಿರ ರೂ. ನಗದು ಹಾಗೂ ಫಲಕ ಒಳಗೊಂಡಿದೆ. ಆ. 1ರಂದು ಸಂಜೆ 5 ಗಂಟೆಗೆ ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿರುವ ಮಲ್ಟಿ ಮಿಡಿಯಾ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಸಂದರ್ಭದಲ್ಲಿ ಕೆ.ಎನ್.ನರಸಿಂಹಸ್ವಾಮಿ ಅವರ ಗೀತಗಾಯನ ಹಾಗೂ ನೃತ್ಯ ಪ್ರದರ್ಶನ ಏರ್ಪಡಿಸಲಾಗಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಿ.ವಿ. ನಂದೀಶ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net