ಹೈದರಾಬಾದ್ ಸಂಸ್ಥಾನ ವಿಮೋಚನಾ ಹೋರಾಟಗಾರ,ಲೇಖಕ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದಿವಂಗತ ಮಹಾದೇವಪ್ಪ ಕಡೇಚೂರ್ ಅವರ ಇತ್ತೀಚೆಗೆ ಬಿಡುಗಡೆಗೊಂಡ "ಅಯ್ಯನ ಕಥೆಗಳು" ಮಕ್ಕಳ ಕಥಾ ಸಂಕಲನ ಪುಸ್ತಕ ವಿತರಣಾ ಕಾರ್ಯಕ್ರಮಕ್ಕೆ ಕಲಬುರಗಿಯ ಹಿರಿಯ ಸಾಹಿತಿ ಹಾಗೂ ಗುಲ್ಬರ್ಗ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಎಸ್ ಪಿ ಸುಳ್ಳದ್ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಹಿತಿಗಳು ಮತ್ತು ಜಾನಪದ ವಿದ್ವಾಂಸರಾದ ಡಾ.ಚಿ.ಸಿ ನಿಂಗಣ್ಣ ಭಾಗವಹಿಸಲಿದ್ದಾರೆ. ಎಂ ಪಿ ಎಚ್ ಎಸ್ ಕಾಲೇಜಿನ ಪ್ರಾಂಶುಪಾಲರಾದ ದೇವಿದಾಸ್ ಪವಾರ್ ಅಧ್ಯಕ್ಷತೆ ವಹಿಸಲಿದ್ದು ಹಿರಿಯ ಉಪನ್ಯಾಸಕರಾದ ಶ್ರೀಮತಿ ಸಂಗೀತ ಕಪೂರ್ ಉಪಸ್ಥಿತರಿರುವರು ಎಂದು ಟ್ರಸ್ಟಿ ಡಾ.ಸದಾನಂದ ಪೆರ್ಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.