ಬಹುಜನರ ಏಳಿಗೆಗೆ ಹೋರಾಡಿದ ಮಹನೀಯ

ಹಲಗೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಡಾ.ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಹಲಗೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಡಾ.ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಕಾರ್ಯಕ್ರಮ ಆಯೋಜಿಸಲಾಗಿತ್ತು.
Published on
ಹಲಗೂರು: ಶ್ರೇಣೀಕೃತ ಜಾತಿ ವ್ಯವಸ್ಥೆ ವಿರೋಧಿಸಿ, ಸಾಮಾಜಿಕ ಹೋರಾಟಕ್ಕೆ ಧುಮುಕುವ ಮೂಲಕ ದೇಶದ ಬಹುಜನರ ಏಳಿಗೆಗಾಗಿ ಜೀವನದುದ್ದಕ್ಕೂ ಹೋರಾಡಿದ ಮಹಾನ್ ಚೇತನ ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಪ್ರಾಂಶುಪಾಲ ಆಲಂಗೂರು ಮಂಜುನಾಥ್ ಬಣ್ಣಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಅಂಬೇಡ್ಕರ್ ಪರಿ ನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡಾ.ಅಂಬೇಡ್ಕರ್ ಅವರು ತೀವ್ರ ಬಡತನದ ನಡುವೆಯೂ ಉತ್ತಮ ಶಿಕ್ಷಣ ಪಡೆದು ತಮ್ಮ ಅದ್ವಿತೀಯ ಜ್ಞಾನದ ಮೂಲಕ ದೇಶದ ಜನರಿಗೆ ಅಗತ್ಯವಿರುವ ಉತ್ತಮ ಸಂವಿಧಾನ ನೀಡಿದ್ದಾರೆ. ದೇಶದ ಎಲ್ಲ ಬಗೆಯ ಜನರಿಗೂ ಶಿಕ್ಷಣ, ಸ್ವಾತಂತ್ರ್ಯದ ಜತೆಗೆ ಸರ್ವರಿಗೂ ಸಮಾನ ಹಕ್ಕು, ಅವಕಾಶಗಳನ್ನು ಒದಗಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ್ ಮಾತನಾಡಿ, ದೇಶದಲ್ಲಿದ್ದ ಶ್ರೇಣಿಕೃತ ಸಮಾಜದಲ್ಲಿ ಅಸಮಾನತೆ ನಿವಾರಿಸಿ, ಸಮಾನತೆ, ನ್ಯಾಯ, ಸ್ವಾತಂತ್ರ್ಯ, ಭ್ರಾತೃತ್ವದ ಮೌಲ್ಯಗಳನ್ನು ಸಾರಿದ ಸಂವಿಧಾನವನ್ನು ರಾಷ್ಟ್ರಕ್ಕೆ ನೀಡಿದ ಮಹಾನ್ ಮಾನವತಾವಾದಿ ಡಾ.ಅಂಬೇಡ್ಕರ್. ದೇಶದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ, ಆರ್ಥಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ರಾಜಕೀಯ ನ್ಯಾಯ ದೊರಕಲು ಅಂಬೇಡ್ಕರ್ ಹೋರಾಡಿದರು ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಸಾಂಸ್ಕೃತಿಕ ವಿಭಾಗದ ಸಂಚಾಲಕಿ ಸುಧಾ ಬಿದರಿ, ಅಧೀಕ್ಷಕ ಕುಮಾರಸ್ವಾಮಿ, ಆನಂದ್ ಕುಮಾರ್ ನೀಲಿ, ಉಪನ್ಯಾಸಕರಾದ ಎಂ.ಎಚ್.ಮೂರ್ತಿ, ಉಮೇಶ್, ರಘು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net