ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡ ವೆಂಕಣ್ಣ ಕಳ್ಳಿಗುಡ್ಡ ಮಾತನಾಡಿದರು. ಮುಖಂಡರಾದ ಕುಮಾರಸ್ವಾಮಿ ಹಿರೇಮಠ, ಮಲ್ಲು ಕೋಟಿ, ಅರುಣ ಕಟ್ಟಿಮನಿ, ನಾಗರಾಜ ಅಂಬಿಗೇರ, ಕೃಷ್ಣಾ ಹಸರೆಡ್ಡಿ ಇತರರು ಇದ್ದರು.
ಬಾಗಲಕೋಟೆ: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಅನಽಕೃತ ಕಸಾಯಿ ಖಾನೆಗಳಲ್ಲಿ ಕಾನೂನು ಬಾಹಿರವಾಗಿ ಗೋಹತ್ಯೆ ನಡೆಯುತ್ತಿದ್ದು, ಇದನ್ನು ತಕ್ಷಣವೇ ತಡೆಗಟ್ಟಬೇಕು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ವೆಂಕಣ್ಣ ಕಳ್ಳಿಗುಡ್ಡ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಅನಽಕೃತವಾಗಿ ಗೋವುಗಳನ್ನು ಕತ್ತರಿಸಿ, ಅವುಗಳ ತ್ಯಾಜ್ಯವನ್ನು ನದಿಗೆ ಎಸೆಯುವ ಮೂಲಕ ಪರಿಸರ ಮಾಲಿನ್ಯ ಮಾಡಲಾಗುತ್ತಿದೆ. ಈ ಕುರಿತು ಈಗಾಗಲೇ ಪೊಲೀಸ್ ಇಲಾಖೆಗೆ ಸೂಕ್ತ ಸಾಕ್ಷ್ಯಾಧಾರಗಳೊಂದಿಗೆ ಹಲವು ಬಾರಿ ಮಾಹಿತಿ ನೀಡಲಾಗಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದರು.
ಮೇ ೨೮ ರಂದು ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋಹತ್ಯೆ ತಡೆಯಲು ಪೊಲೀಸ್ ಇಲಾಖೆ ಈಗಿನಿಂದಲೇ ಮುನ್ನೆಚ್ಚರಿಕೆ ವಹಿಸಬೇಕು. ಒಂದು ವೇಳೆ ಇಲಾಖೆಯು ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಹಿಂದೂ ಸಂಘಟನೆಗಳೇ ಕಾನೂನುಬಾಹಿರ ಗೋ ಸಾಗಾಟ ಮತ್ತು ಹತ್ಯೆಯನ್ನು ತಡೆಯಲು ಮುಂದಾಗಬೇಕಾಗುತ್ತದೆ. ಈ ವೇಳೆ ಏನಾದರೂ ಅಹಿತಕರ ಘಟನೆಗಳು ಸಂಭವಿಸಿದರೆ ಅದಕ್ಕೆ ಜಿಲ್ಲಾಡಳಿತ ಮತ್ತು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿಗಳೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಗೋ ಹತ್ಯೆ ಕಾಯ್ದೆ-೨೦೨೩ ಕಟ್ಟುನಿಟ್ಟು ಪಾಲನೆಯಾಗುತ್ತಿಲ್ಲ. ಆಯಾ ಸಂಬAಧಪಟ್ಟ ಇಲಾಖೆಗಳು ಕಾರ್ಯ ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ದನದ ಸಂತೆಗಳಲ್ಲಿ ಗೋ ಮಾರಾಟ ನಡೆಯುತ್ತದೆ. ದಲ್ಲಾಳಿಗಳ ಹಾವಳಿ ಹೆಚ್ಚಾಗಿ ಆಗುತ್ತಿದೆ ಈ ಕಾರಣಕ್ಕೆ ಜಿಲ್ಲಾದ್ಯಂತ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಹಾಗೂ ಪ್ರಾಣಿ ಸಂರಕ್ಷಣಾ ಇಲಾಖೆ ಕಟ್ಟು ನಿಟ್ಟಿನ ಕ್ರಮ ಬಹಿಸಬೇಕೆಂದು ಆಗ್ರಹಿಸಿದರು.
ಮುಖಂಡರಾದ ಕುಮಾರಸ್ವಾಮಿ ಹಿರೇಮಠ, ಮಲ್ಲು ಕೋಟಿ, ಅರುಣ ಕಟ್ಟಿಮನಿ, ನಾಗರಾಜ ಅಂಬಿಗೇರ, ಕೃಷ್ಣಾ ಹಸರೆಡ್ಡಿ ಇತರರು ಇದ್ದರು.