ಲೋಕಸಭೆ ಚುನಾವಣೆ ಬಳಿಕ ಜಿಲ್ಲೆಯಲ್ಲಿ ಒಮ್ಮೆಯೂ ಜೆಡಿಎಸ್ ಸಭೆ ನಡೆದಿಲ್ಲ. ಸಂಸದರಿದ್ದಾರೆ, ಇಬ್ಬರು ಶಾಸಕರಿದ್ದಾರೆ, ಒಬ್ಬರು ವಿಧಾನ ಪರಿಷತ್ ಸದಸ್ಯರಿದ್ದಾರೆ, ಎಲ್ಲರನ್ನೂ ಒಟ್ಟುಗೂಡಿಸಿ ಸಭೆ ನಡೆಸಿಲ್ಲ. ನಾನು ೧೯೮೯ರಿಂದ ಈ ಪಕ್ಷದಲ್ಲಿ ಇದ್ದೇನೆ. ಆಗಿನಿಂದಲೂ ಪ್ರಾಮಾಣಿಕವಾಗಿ ಪಕ್ಷ ಸಂಘಟನೆ, ಹೋರಾಟ ಮಾಡಿಕೊಂಡು ಬಂದಿದ್ದೇನೆ. ಯಾರೂ ಇಲ್ಲದಿದ್ದಾಗಲೂ ಪಕ್ಷದ ಬಾವುಟ ಹಿಡಿದಿದ್ದೆವು. ಈಗ ನಡೆಯುತ್ತಿರುವ ವಿದ್ಯಮಾನಗಳನ್ನು ನೋಡಿದರೆ ತುಂಬಾ ನೋವಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.