ಬೆಂ.ವಿವಿ ಪಿಎಚ್.ಡಿ. ಪ್ರವೇಶ ಪರೀಕ್ಷೆ ಯಶಸ್ವಿ: 15 ದಿನಗಳಲ್ಲಿ ಪ್ರಕ್ರಿಯೆ ಪೂರ್ಣಕ್ಕೆ ಸಿದ್ಧತೆ

ಬೆಂ.ವಿವಿ ಪಿಎಚ್.ಡಿ. ಪ್ರವೇಶ ಪರೀಕ್ಷೆ
ಬೆಂ.ವಿವಿ ಪಿಎಚ್.ಡಿ. ಪ್ರವೇಶ ಪರೀಕ್ಷೆ
Published on

ಪ್ರಮುಖ ಮುಖ್ಯಾಂಶಗಳು

  • ಪರೀಕ್ಷಾ ಕೇಂದ್ರಗಳಲ್ಲಿ ಬಹುಹಂತದ ತಪಾಸಣೆ ನಡೆಸಲಾಗಿದ್ದು, ಭದ್ರತಾ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಯಿತು.
  • ಪಿಎಚ್.ಡಿ. ಪ್ರವೇಶದ ಮೌಖಿಕ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಜು.11ರಂದು ಪ್ರಕಟಿಸಲಾಗುವುದು.
  • ಜು.14 ಮತ್ತು 15ರಂದು ಸಂಬಂಧಿತ ಸ್ನಾತಕೋತ್ತರ ವಿಭಾಗಗಳಲ್ಲಿ ಮೌಖಿಕ ಪರೀಕ್ಷೆ ನಡೆಯಲಿದೆ. ಜು.17ರಂದು ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗುವುದು.
  • ಜು.20ರಂದು ಸೀಟುಗಳ ಹಂಚಿಕೆಗಾಗಿ ಕೌನ್ಸೆಲಿಂಗ್
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ 2026ನೇ ಸಾಲಿನ ಪಿಎಚ್.ಡಿ. ಪ್ರವೇಶ ಪರೀಕ್ಷೆಯನ್ನು ಭಾನುವಾರ ಯಶಸ್ವಿಯಾಗಿ ನಡೆಸಲಾಯಿತು. ಒಟ್ಟು 1,299 ಅಭ್ಯರ್ಥಿಗಳಲ್ಲಿ 870 ಮಂದಿ ಹಾಜರಾಗಿದ್ದರು. 429 ಅಭ್ಯರ್ಥಿಗಳು ಗೈರಾಗಿದ್ದರು.
ಕಲಾ, ವಿಜ್ಞಾನ, ವಾಣಿಜ್ಯ, ನಿರ್ವಹಣೆ, ದೈಹಿಕ ಶಿಕ್ಷಣ ಹಾಗೂ ಕಾನೂನು ನಿಕಾಯಗಳ ಅಭ್ಯರ್ಥಿಗಳಿಗಾಗಿ ಕೆಂಗೇರಿ ಉಪನಗರದ ಸುರಾನ ಕಾಲೇಜು ಹಾಗೂ ಶೇಷಾದ್ರಿಪುರಂ ಅಕಾಡೆಮಿ ಆ್ ಬಿಜಿನೆಸ್ ಸ್ಟಡೀಸ್ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲಾಯಿತು.
ಪರೀಕ್ಷಾ ಕೇಂದ್ರಗಳಲ್ಲಿ ಬಹುಹಂತದ ತಪಾಸಣೆ ನಡೆಸಲಾಗಿದ್ದು, ಭದ್ರತಾ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಯಿತು.
ಪರೀಕ್ಷಾ ಕೇಂದ್ರಕ್ಕೆ ವಿವಿ ಕುಲಪತಿ ಡಾ. ಎಸ್.ಎಂ. ಜಯಕರ್, ಕುಲಸಚಿವೆ ಕೆ.ಟಿ. ಶಾಂತಲಾ ಹಾಗೂ ಕುಲಸಚಿವರು (ಮೌಲ್ಯಮಾಪನ) ಪ್ರೊ. ಸಿ.ಎಸ್. ಕರಿಗಾರ್ ಅವರು ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆಯನ್ನು ಪರಿಶೀಲಿಸಿದರು.

11ರಂದು ಅರ್ಹತಾ ಪಟ್ಟಿ ಪ್ರಕಟ:

ಪಿಎಚ್.ಡಿ. ಪ್ರವೇಶದ ಮೌಖಿಕ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಜು.11ರಂದು ಪ್ರಕಟಿಸಲಾಗುವುದು. ಜು.14 ಮತ್ತು 15ರಂದು ಸಂಬಂಧಿತ ಸ್ನಾತಕೋತ್ತರ ವಿಭಾಗಗಳಲ್ಲಿ ಮೌಖಿಕ ಪರೀಕ್ಷೆ ನಡೆಯಲಿದೆ. ಜು.17ರಂದು ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗುವುದು. ಜು.20ರಂದು ಸೀಟುಗಳ ಹಂಚಿಕೆಗಾಗಿ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಮೌಲ್ಯಮಾಪನ ಕುಲಸಚಿವರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net