ಬಸವಣ್ಣರ ತತ್ವಗಳನ್ನು ಅಳವಡಿಸಿಕೊಳ್ಳಿ
| ಡಾ.ಸಂಜಯ ಕಂಬಾರ ಅಭಿಪ್ರಾಯ | ಬಸವ ಜಯಂತಿ ಕಾರ್ಯಕ್ರಮ
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಮಹಾನ್ ಮಾನವತಾವಾದಿ ಬಸವಣ್ಣರ ಸಮಾನತೆ, ಸತ್ಯ, ಸೇವಾ ಸಂದೇಶಗಳು ಪ್ರಸ್ತುತ ಪ್ರಸ್ತುತವಾಗಿವೆ.ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೆಎಲ್‌ಇ ಶತಮಾನೋತ್ಸವ ಚಾರೀಟೆಬಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಸಂಜಯ ಕಂಬಾರ ಅಭಿಪ್ರಾಯಪಟ್ಟರು.
ನಗರದ ಯಳ್ಳೂರ ರಸ್ತೆಯಲ್ಲಿನ ಕೆಎಲ್‌ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಮಾನವೀಯ ಮೌಲ್ಯಗಳ ಬೆಳವಣಿಗೆಗೆ ಬಸವಣ್ಣನವರ ಸಂದೇಶಗಳು ಸದಾ ಪ್ರೇರಣೆಯಾಗಿವೆ.ಜಾತಿ ಪದ್ಧತಿ ನಿರ್ಮೂಲನೆ, ಸಮ ಸಮಾಜ ನಿರ್ಮಾಣಕ್ಕಾಗಿ ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ, ಅವರ ವಿಚಾರಗಳನ್ನು ಪಾಲಿಸುವುದು ಅವಶ್ಯಕವಾಗಿದೆ ಎಂದರು.
ಆಸ್ಪತ್ರೆಯ ಆಡಳಿತ ಅಧಿಕಾರಿ ನವೀನ್.ಎನ್ ಮಾತನಾಡಿ ಬಸವಣ್ಣನವರ ಸಮಾಜದಲ್ಲಿ ಬದಲಾವಣೆ ತರುವಲ್ಲಿ ಅವರ ಕೊಡುಗೆ ಅಪಾರವಾಗಿದೆ, ಅವರ ನಡೆ,ನುಡಿ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿವೆ ಎಂದರು.
ಕೆಎಲ್‌ಐ ನಿರ್ದೇಶಕ ಎಚ್.ಬಿ.ರಾಜಶೇಖರ ಇದ್ದರು.ಪ್ರಭಾವತಿ ಪಾಟೀಲ ನಿರೂಪಿಸಿದರು.