ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ವೈಭವದಿಂದ ಆಚರಿಸುವ ಉದ್ದೇಶದಿಂದ ರೂಪರೇಷೆಗಳು, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ, ಉಪನ್ಯಾಸ, ಸಮಾಜಮುಖಿ ಚಟುವಟಿಕೆ ಹಾಗೂ ವಿವಿಧ ಸಮಿತಿ ರಚನೆ ಕುರಿತು ಚರ್ಚಿಸಲಾಗುವುದು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.