ಬಸವಣ್ಣನ ಜನ್ಮ ಸ್ಥಳ ಬಸವನಬಾಗೇವಾಡಿ ಕಡೆಗಣನೆ

ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ದೇವಸ್ಥಾನದ ಒಳ ಆವರಣದ ಬಸವ ಭವನದಲ್ಲಿ ಬಸವ ಜಯಂತಿ ಆಚರಣೆ ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಸಿದ್ಧಲಿಂಗ ಶ್ರೀಗಳು ಮಾತನಾಡಿದರು. ಶಂಕರಗೌಡ ಬಿರಾದಾರ, ಬಸವರಾಜ ಗೊಳಸಂಗಿ, ರಾಜು ಗಣಾಚಾರಿ ಮತ್ತಿತರರಿದ್ದರು.
ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ದೇವಸ್ಥಾನದ ಒಳ ಆವರಣದ ಬಸವ ಭವನದಲ್ಲಿ ಬಸವ ಜಯಂತಿ ಆಚರಣೆ ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಸಿದ್ಧಲಿಂಗ ಶ್ರೀಗಳು ಮಾತನಾಡಿದರು. ಶಂಕರಗೌಡ ಬಿರಾದಾರ, ಬಸವರಾಜ ಗೊಳಸಂಗಿ, ರಾಜು ಗಣಾಚಾರಿ ಮತ್ತಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿರಕ್ತಮಠದ ಸಿದ್ಧಲಿಂಗ ಶ್ರೀಗಳ ಅಸಮಾಧಾನ
  • ಪೂರ್ವಭಾವಿ ಸಭೆ ಆಯೋಜನೆ
ಬಸವನಬಾಗೇವಾಡಿ: ಬಸವಣ್ಣನವರ ಐಕ್ಯ ಸ್ಥಳ ಕೂಡಲಸಂಗಮಕ್ಕೆ ಹಾಗೂ ಕಾರ್ಯ ಕ್ಷೇತ್ರ ಬಸವಕಲ್ಯಾಣಕ್ಕೆ ರಾಜ್ಯಸರ್ಕಾರ ನೀಡುವ ಪ್ರಾತಿನಿಧ್ಯತೆ ಬಸವಣ್ಣನ ಜನ್ಮ ಸ್ಥಳ ಬಸವನಬಾಗೇವಾಡಿಗೆ ನೀಡುತ್ತಿಲ್ಲ ಎಂದು ವಿರಕ್ತಮಠದ ಸಿದ್ಧಲಿಂಗ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದ ಬಸವೇಶ್ವರ ದೇವಸ್ಥಾನದ ಒಳ ಆವರಣದ ಬಸವ ಭವನದಲ್ಲಿ ಶುಕ್ರವಾರ ಬಸವ ಜಯಂತಿ ಆಚರಣೆ ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಬಸವನಬಾಗೇವಾಡಿ ಪ್ರತ್ಯೇಕ ಪ್ರಾಧಿಕಾರ ಮಾಡಿ ಎರಡು ವರ್ಷ ಗತಿಸಿದರೂ, ರಾಜ್ಯ ಸರ್ಕಾರ ಪ್ರಾಧಿಕಾರಕ್ಕೆ ವಿಶೇಷ ಅನುದಾನ ಮತ್ತು ಇನ್ನಿತರ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣ ಮೀಸಲು ಇಟ್ಟಿಲ್ಲ. ಆದರೆ ಬಸವಕಲ್ಯಾಣದಲ್ಲಿ ಕೋಟ್ಯಂತರ ರೂಪಾಯಿ ಹಣದಲ್ಲಿ ಅನುಭವ ಮಂಟಪ ನಿರ್ಮಾಣ ಸೇರಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಬಜೆಟ್‌ನಲ್ಲಿ ಬಸವಕಲ್ಯಾಣದಲ್ಲಿ ರಾಷ್ಟ್ರೀಯ ವಚನ ಅಧ್ಯಯನ ಕೇಂದ್ರ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ಆದರೆ ಬಸವನಬಾಗೇವಾಡಿಗೆ ರಾಜ್ಯ ಸರ್ಕಾರ ಎಲ್ಲಾ ವಿಷಯದಲ್ಲಿ ನಿರ್ಲಕ್ಷೃ ಮಾಡುತ್ತಿರುವುದರಿಂದ ಬಸವ ಭಕ್ತರಿಗೆ ನೋವನ್ನುಂಟು ಮಾಡಿದೆ ಎಂದು ಹೇಳಿದರು.
ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಇನ್ನೊಮ್ಮೆ ಬಸವ ಜಯಂತಿಯ ಸಭೆ ಕರೆದು ಬಸವ ಜಯಂತಿ ಆಚರಣೆ ಕುರಿತು ಸುದೀರ್ಘ ವಾಗಿ ಚರ್ಚಿಸೋಣ ಎಂದು ತಿಳಿಸಿದರು.
ನಿವೃತ್ತ ಶಿಕ್ಷಕ ಎಂ. ಜಿ. ಆದಿಗೊಂಡ ಪ್ರಾಸ್ತಾವಿಕವಾಗಿ ಮಾತನಾಡಿ ಏ.18ರಿಂದ 20ರವರಿಗೆ ಜಿಲ್ಲೆ ಮತ್ತು ರಾಜ್ಯ ಮಟ್ಟದ ಸಾಹಿತಿ, ವಚನಕಾರ, ಸಂಗೀತೋತ್ಸವ ಕಾರ್ಯಕ್ರಮ ಆಯೋಜನೆ ಮಾಡಬೇಕು. ಏ.20ರಂದು ಬೆಳಗ್ಗೆ ಬಸವಣ್ಣನವರ ಜನ್ಮ ಸ್ಮಾರಕದಲ್ಲಿ ರಾಷ್ಟ್ರೀಯ ತೊಟ್ಟಿಲು ಉತ್ಸವ, ಸಂಜೆ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಬಸವರಾಜ ಗೊಳಸಂಗಿ, ರಾಜು ಗಣಾಚಾರಿ, ವಿನೂತ ಕಲ್ಲೂರ, ಶೇಖರ ಗೊಳಸಂಗಿ, ವಿವೇಕಾನಂದ ಕಲ್ಯಾಣಶೆಟ್ಟಿ, ತಹಶೀಲ್ದಾರ ಯಮನಪ್ಪ ಸೋಮನಕಟ್ಟಿ, ಮುಖ್ಯಾಧಿಕಾರಿ ವಿದ್ಯಾಧರ ಕಲಾದಗಿ, ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net