ಏ.4ರಂದು ಬಿಸಿಯು 5ನೇ ಘಟಿಕೋತ್ಸವ

ಬೆಂಗಳೂರು ನಗರ ವಿಶ್ವವಿದ್ಯಾಲಯ
ಬೆಂಗಳೂರು ನಗರ ವಿಶ್ವವಿದ್ಯಾಲಯ
Published on
ಬೆಂಗಳೂರು: ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ 5ನೇ ವಾರ್ಷಿಕ ಘಟಿಕೋತ್ಸವವು ಏ.4ರಂದು ನಡೆಯಲಿದೆ.
ಅಂದು ಬೆಳಗ್ಗೆ 11.30ಕ್ಕೆ ಜ್ಯಾನಜ್ಯೋತಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿರುವ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ.
ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮಹಾ ನಿರ್ದೇಶಕ ಡಾ. ಬಿನಯ್‌ಕುಮಾರ್ ದಾಸ್ ಮುಖ್ಯ ಅತಿಥಿಗಳಾಗಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ರಮೇಶ್ ಭಾಗವಹಿಸಲಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net