ದೇಶದ ಅಭಿವೃದ್ಧಿಯಲ್ಲಿ ಸಕ್ರಿಯರಾಗಿ

ಕೊರಟಗೆರೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಮುರಳೀಧರ ಹಾಲಪ್ಪ ಉದ್ಘಾಟಿಸಿದರು. ಕಾಂಗ್ರೆಸ್ ಮಹಿಳಾ ತಾಲೂಕು ಅಧ್ಯಕ್ಷೆ ಜಯಮ್ಮ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ವೆಂಕಟೇಶಮೂರ್ತಿ, ಪುರಸಭೆ ಮುಖ್ಯಾಧಿಕಾರಿ ಉಮೇಶ್, ರೋಟರಿ ಅಧ್ಯಕ್ಷ ದರ್ಶನ್ ಇತರರು ಇದ್ದರು.
ಕೊರಟಗೆರೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಮುರಳೀಧರ ಹಾಲಪ್ಪ ಉದ್ಘಾಟಿಸಿದರು. ಕಾಂಗ್ರೆಸ್ ಮಹಿಳಾ ತಾಲೂಕು ಅಧ್ಯಕ್ಷೆ ಜಯಮ್ಮ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ವೆಂಕಟೇಶಮೂರ್ತಿ, ಪುರಸಭೆ ಮುಖ್ಯಾಧಿಕಾರಿ ಉಮೇಶ್, ರೋಟರಿ ಅಧ್ಯಕ್ಷ ದರ್ಶನ್ ಇತರರು ಇದ್ದರು.
Published on

ಕೊರಟಗೆರೆ :

ರಾಜೀವ್ ಗಾಂಧಿ, ಡಿ.ದೇವರಾಜ ಅರಸು ಅವರ ಆದರ್ಶ, ಚಿಂತನೆ, ಸವಾಜಮುಖಿ ಕಾರ್ಯ ಯುವಜನತೆ ಜೀವನದಲ್ಲಿ ಅಳವಡಿಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹಾಲಪ್ಪ ಪ್ರತಿಷ್ಠಾನದ ಮುಖ್ಯಸ್ಥ ಮುರಳೀಧರ ಹಾಲಪ್ಪ ಕರೆ ನೀಡಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಲಪ್ಪ ಪ್ರತಿಷ್ಠಾನ ಹಾಗೂ ಕಾಲೇಜು ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ವಾಜಿ ಸಿಎಂ ದೇವರಾಜ ಅರಸು ಅವರ ಜನ್ಮ ದಿನಾಚರಣೆಯಲ್ಲಿ ಮಾತನಾಡಿ, ರಾಜೀವ್ ಗಾಂಧಿ 21ನೇ ಶತವಾನದ ಭಾರತದ ಕನಸು ಕಂಡ ದೂರದೃಷ್ಟಿಯ ನಾಯಕ. ದೇಶದಲ್ಲಿ ತಂತ್ರಜ್ಞಾನ ಕ್ರಾಂತಿಗೆ ಮುನ್ನುಡಿ ಬರೆದ ಅವರು, ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸುವ ಜತೆಗೆ ಯುವಜನತೆಗೆ 18ನೇ ವಯಸ್ಸಿನಲ್ಲೇ ಮತದಾನದ ಹಕ್ಕು ಕಲ್ಪಿಸಿ ಪ್ರಜಾಪ್ರಭುತ್ವದಲ್ಲಿ ಯುವಕರ ಪಾತ್ರ ಹೆಚ್ಚಿಸಿದರು. ಡಿ.ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಹರಿಕಾರರಾಗಿ ಸಾವಾಜಿಕ ನ್ಯಾಯಕ್ಕಾಗಿ ಹೋರಾಡಿದ ಮಹಾನ್ ನಾಯಕರು ಎಂದರು.
ಈ ವೇಳೆ ವಿದ್ಯಾರ್ಥಿಗಳು ಕಾಲೇಜಿನಲ್ಲಿನಸಮಸ್ಯೆಗಳ ಕುರಿತು ಮುರಳೀಧರ ಹಾಲಪ್ಪ ಗಮನಕ್ಕೆ ತಂದರು. ವಿದ್ಯಾರ್ಥಿಗಳ ಮನವಿಗೆ ತಕ್ಷಣ ಸ್ಪಂದಿಸಿದ ಮುರಳೀಧರ ಹಾಲಪ್ಪ ಸ್ಥಳದಲ್ಲೇ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಕರೆ ವಾಡಿ ನಾಳೆಯಿಂದಲೇ ಕಾಲೇಜಿನ ಬಳಿ ಬಸ್ ನಿಲುಗಡೆಗೆ ವ್ಯವಸ್ಥೆ ವಾಡುವಂತೆ ಸೂಚಿಸಿದರು.
ರಾಜೀವ್ ಗಾಂಧಿ ಮತ್ತು ದೇವರಾಜ ಅರಸು ಅವರ ಆಡಳಿತ, ಸಾವಾಜಿಕ ಸುಧಾರಣೆ ಹಾಗೂ ಯುವಜನತೆಗೆ ನೀಡಿದ ಪ್ರೇರಣೆ ಕುರಿತು ಪ್ರಬಂಧ, ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಬಹುವಾನ ವಿತರಿಸಲಾಯಿತು.
ಉಪನ್ಯಾಸಕರಾದ ದೀಪಾ, ಮುನಿರಾಜ್, ದೇವರಾಜು, ಡಾ.ಶಿವಪ್ಪ, ಅಶ್ವಾಕ್ ಅಹಮದ್, ಮುಖಂಡರಾದ ಲಕ್ಷ್ಮಮ್ಮ, ಶಂಕರಮ್ಮ, ದಿಲೀಪ್ ಕುವಾರ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net