ಸಾಂಕ್ರಾಮಿಕ ರೋಗದಿಂದ ಜಾಗೃತಿ ವಹಿಸಿ

ಕೆಂಭಾವಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಡಾ.ಗಿರೀಶ ಕುಲಕರ್ಣಿ, ರೇವಣಸಿದಪ್ಪ, ಪ್ರೇಮಾ, ಸುನಿತಾ, ಸುಜಾತಾ ಇದ್ದರು.
ಕೆಂಭಾವಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಡಾ.ಗಿರೀಶ ಕುಲಕರ್ಣಿ, ರೇವಣಸಿದಪ್ಪ, ಪ್ರೇಮಾ, ಸುನಿತಾ, ಸುಜಾತಾ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವೈದ್ಯಾಧಿಕಾರಿ ಡಾ.ಗಿರೀಶ ಕುಲಕರ್ಣಿ ಸಲಹೆ
  • ಕೆಂಭಾವಿಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ
 ಕೆಂಭಾವಿ: ನಮ್ಮ ಸುತ್ತಮುತ್ತಲಿನ ಮಲಿನ ಪರಿಸರದಿಂದ ಬರುವ ಸಾಂಕ್ರಾಮಿಕ ರೋಗಗಳ ಬಗ್ಗೆ ನಾವು ಸದಾ ಜಾಗೃತಿ ವಹಿಸಿ ನಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಿರೀಶ ಕುಲಕರ್ಣಿ ಹೇಳಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನುಷ್ಯನಿಗೆ ಉತ್ತಮ ಆರೋಗ್ಯವೇ ದೊಡ್ಡ ಸಂಪತ್ತಾಗಿದ್ದು, ನಮ್ಮ ಮತ್ತು ನಮ್ಮ ಕುಟುಂಬದ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕರೆ ನೀಡಿದರು.
ಇನ್ನು ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದ್ದು, ನಮ್ಮ ಮನೆಯ ಅಂಗಳ ಸೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಲಿನ ನೀರು ನಿಲ್ಲದಂತೆ ಸ್ವತ@ ನಾವೇ ಜಾಗೃತಿ ವಹಿಸುವುದು ಬಹಳ ಮುಖ್ಯವಾಗಿದೆ. ಅಲ್ಲದೆ ವಿಶೇಷವಾಗಿ ನೀರಿನ ಟ್ಯಾಂಕ್​, ಬ್ಯಾರಲ್​ ಸೇರಿ ನೀರು ಸಂಗ್ರಹ ಮಾಡುವ ಪ್ರತಿಯೊಂದು ವಸ್ತುಗಳನ್ನು ನಿತ್ಯ ಸ್ವಚ್ಛಗೊಳಿಸಿ ನೀರು ಸಂಗ್ರಹಿಸಬೇಕು ಎಂದು ಸಲಹೆ ನೀಡಿದರು.
ಮಳೆಗಾಲ ಆರಂಭವಾಗುವ ಮೊದಲು ಮತ್ತು ನಂತರದ ದಿನಗಳಲ್ಲಿ ಪಟ್ಟಣದ ವಿವಿಧೆಡೆಗಳಲ್ಲಿ ಕೀಟನಾಶಕ ಸಿಂಪರಣೆ ಮಾಡುವಂತೆ ಸ್ಥಳಿಯ ಪುರಸಭೆಗೆ ಪತ್ರ ಬರೆಯಲಾಗುವುದು. ಮುಂಜಾಗ್ರತಾ ಕ್ರಮವಾಗಿ ರೋಗಿಗಳಿಗೆ ತೊಂದರೆಯಾಗದಂತೆ ಆರೋಗ್ಯ ಕೇಂದ್ರದಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರೇವಣಸಿದ್ದಪ್ಪ, ಶ್ರೀದೇವಿ, ಪ್ರೇಮಾ, ಸುಜಾತಾ, ಸುನಿತಾ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net