ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಿ

 ,
,
Published on

ಚಿತ್ತಾಪುರ: ಬೇಸಿಗೆ ಶುರುವಾಗಿದ್ದು, ಹಲವೆಡೆ ನೀರಿನ ಸಮಸ್ಯೆ ತಲೆದೂರಲಿದೆ. ಅಧಿಕಾರಿಗಳು ಈಗಿನಿಂದಲೇ ಮುನ್ನೆಚ್ಚರಿಕೆ ವಹಿಸಿ ಜಲಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಸೇಡಂ ಸಹಾಯಕ ಆಯುಕ್ತ ಪ್ರಭುರೆಡ್ಡಿ ಸೂಚನೆ ನೀಡಿದರು. ಪ್ರಜಾಸೌಧ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕುಡಿಯುವ ನೀರಿನ ಸಮಸ್ಯೆ ಕುರಿತ ಅಧಿಕಾರಿಗಳ ಸಭೆಯಲ್ಲಿ ಅಧ್ಯತೆ ವಹಿಸಿ ಮಾತನಾಡಿ, ನೀರಿನ ಸಮಸ್ಯೆಯಿರುವ ಸ್ಥಳಗಳನ್ನು ಅಧಿಕಾರಿಗಳು ಮೊದಲು ಪಟ್ಟಿ ಮಾಡಿಕೊಳ್ಳಬೇಕು. ಕೇವಲ ಕಚೇರಿಗೆ ಸೀಮಿತವಾಗದೆ, ಹಳ್ಳಿಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲು ಮುಂದಾಗಬೇಕು. ತಾಲೂಕಿನ ವಿವಿಧ ಗ್ರಾಮಗಳ ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು. ತಹಸೀಲ್ದಾರ್​ ನಾಗಯ್ಯ ಹಿರೇಮಠ, ಗ್ರೇಡ್​-2 ತಹಸೀಲ್ದಾರ್​ ರಾಜಕುಮಾರ ಮರತೂರಕರ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಪಶು ಸಂಗೋಪನಾ ಇಲಾಖೆ ಅಧಿಕಾರಿ ಶಂಕರ ಕಣ್ಣಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಂಜೀವಕುಮಾರ ಮಾನಕರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net