ಕಲಬುರಗಿ: ಜಿಲ್ಲೆಯಲ್ಲಿ ಕೆಲ ದಿನಗಳಿಂದ 45 ಡಿಗ್ರಿ ಸೆಲ್ಸಿಯಸ್ಗಿಂತ ಅಧಿಕ ಉಷ್ಣಾಂಶ ದಾಖಲಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ತೀವ್ರ ಬಿಸಿಗಾಳಿ ಬೀಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಸಾರ್ವಜನಿಕರು, ರೈತರು, ಕಾರ್ಮಿಕರು ಹಾಗೂ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಬಿಸಿಲಿನಲ್ಲಿ ತಿರುಗಾಡುವುದು ಕಡಿಮೆ ಮಾಡಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯೆ ಬಿ.ಫೌಜಿಯಾ ತರುನ್ನುಮ್ ತಿಳಿಸಿದ್ದಾರೆ.