ರೇಣುಕಾ ಹೋದ ನಂತರ ಅದೇ ಶೌಚಾಲಯಕ್ಕೆ ಹೋದ ಮತ್ತೊಬ್ಬ ಮಹಿಳಾ ಉದ್ಯೋಗಿ, ರಕ್ತಸಿಕ್ತ ಬ್ಯಾಗ್ ಕಂಡು ಬೆಚ್ಚಿಬಿದ್ದಿದ್ದಾರೆ. ಕೂಡಲೇ ಅವರು ಕಂಪನಿಯ ಭದ್ರತಾ ಸಿಬ್ಬಂದಿ ಮತ್ತು ಮ್ಯಾನೇಜ್‌ಮೆಂಟ್‌ಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ, ನವಜಾತ ಶಿಶುವನ್ನು ಕೊಲೆ ಮಾಡಿರುವುದು ದೃಢಪಟ್ಟಿದೆ. ಸಿಸಿಟಿವಿ ಕ್ಯಾಮೆರಾ ಹಾಗೂ ಕಂಪನಿಯ ದಾಖಲೆಗಳ ಆಧಾರದ ಮೇಲೆ ತನಿಖೆ ನಡೆಸಿದಾಗ ಕೃತ್ಯ ಎಸಗಿದ್ದು ರೇಣುಕಾ ಎಂದು ತಿಳಿದುಬಂದಿದೆ.