ಬೇವಿನಾಳಮ್ಮದೇವಿ ಮಹೋತ್ಸವ ಸಂಪನ್ನ

Bevinalammadevi Festival is a success
Bevinalammadevi Festival is a success
Published on
ಕೊರಟಗೆರೆ: ತಾಲೂಕಿನ ಜೆಟ್ಟಿ ಅಗ್ರಹಾರ ಗ್ರಾಮದ ಗ್ರಾಮ ದೇವತೆ ಶ್ರೀ ಬೇವಿನಾಳಮ್ಮ ದೇವಿಯ ಜಲಧಿ ಮಹೋತ್ಸವವು ವಿಜೃಂಭಣೆಯಿಂದ ಸಂಪನ್ನಗೊಂಡಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಮುಂಜಾನೆ ದೇವಾಲಯದಲ್ಲಿ ದೇವಿಗೆ ವಿಶೇಷ ಅಭಿಷೇಕ, ಪಂಚಾಮೃತ ಅಭಿಷೇಕ ಹಾಗೂ ವಿವಿಧ ಪುಷ್ಪಗಳಿಂದ ವಿಶೇಷ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಲಾಯಿತು. ಬಳಿಕ ದೇವಿಯ ಉತ್ಸವ ಮೂರ್ತಿಯನ್ನು ಮಂಗಳ ವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು. ನಂತರ ಗ್ರಾಮದ ಕಲ್ಯಾಣಿಯಲ್ಲಿ ಜಲಧಿ ಕಾರ್ಯಕ್ರಮವನ್ನು ಶಾಸೊಕ್ತವಾಗಿ ಹಾಗೂ ಸಾಂಪ್ರದಾಯಿಕವಾಗಿ ನಡೆಸಲಾಯಿತು.
ಬೇವಿನಾಳಮ್ಮ ದೇವಿಯ ಜಲದಿ ಮಹೋತ್ಸವದ ಅಂಗವಾಗಿ ದೇವಿಗೆ ವಿಶೇಷ ನೈವೇದ್ಯ ಸಮರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಆಗಮಿಸಿದ್ದ ಸುಮಾರು ಆರು ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನದಾಸೋಹ ಏರ್ಪಡಿಸಲಾಗಿತ್ತು.
ಜಾತ್ರಾ ಮಹೋತ್ಸವಕ್ಕೆ ಜೆಟ್ಟಿ ಅಗ್ರಹಾರ ಸೇರಿದಂತೆ ಸುತ್ತಮುತ್ತಲಿನ ಏಳು ಗ್ರಾಮಗಳ ಭಕ್ತರು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತ ಸಾಗರ ಹರಿದುಬಂದು, ದೇವಿಯ ದರ್ಶನ ಪಡೆದು ಪುನೀತರಾದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net