

ಪ್ರಮುಖ ಮುಖ್ಯಾಂಶಗಳು
ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಆರು ದಶಕ ಕಂಡಿದ್ದು, ಕಟ್ಟಡ ಸಂಪೂರ್ಣ ಶಿಥಿಲಗೊಂಡು ವಿದ್ಯಾರ್ಥಿಗಳಿಗೆ ತೊಂದರೆಯಾಗಿತ್ತು. ಇದನ್ನು ಖುದ್ದಾಗಿ ಕಂಡು ತಕ್ಷಣ ಹೊಸ ಕಟ್ಟಡ ಮಂಜೂರು ಮಾಡಿಸಿ 20 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕಟ್ಟಡ ನಿರ್ಮಿಸಲಾಗಿದೆ. ಹೆಚ್ಚುವರಿಯಾಗಿ ಇನ್ನೂ ಕೆಲ ಕೆಲಸಗಳು ಬಾಕಿ ಇದ್ದು, ಕಾಲೇಜು ಮಂಡಳಿ ಸಲ್ಲಿಸಿರುವ ಪ್ರಸ್ತಾವನೆಗೆ ಶ್ರೀ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರ ಮುತುವರ್ಜಿಯಿಂದಾಗಿ ಹೊಸ ಕಟ್ಟಡ ನಿರ್ಮಾಣ ಸಾಧ್ಯವಾಗಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಹೆಚ್ಚಿನ ಅನುಕೂಲವಾಗಲಿದೆ. ತರಗತಿ ಕೊಠಡಿ, ಸಿಸಿಟಿವಿ ಜಾಲ ಸೇರಿ ಇನ್ನೂ ಕೆಲವು ಕೆಲಸ ಬಾಕಿ ಇವೆ. ಈ ಕುರಿತು ಎಸ್ಟಿಮೇಟ್ ಸಿದ್ಧಪಡಿಸಿ ಸಚಿವರು ಹಾಗೂ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸಲ್ಲಿಸಲಾಗಿದೆ. ಶೀಘ್ರ ಪರಿಹಾರ ದೊರೆಯುವ ನಿರೀೆಯಿದೆ.