ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕವನ್ನು ( Medical Course Fees ) ಹೆಚ್ಚಳ ಮಾಡದೇ ಯಥಾಸ್ಥಿತಿಯನ್ನೇ ಮುಂದುವರೆಸುವ ಮಹತ್ವ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಸರ್ಕಾರದ ಇಂತಹ ನಿರ್ಧಾರದಿಂದಾಗಿ ಈ ಬಾರಿ ವೈದ್ಯಕೀಯ, ದಂತ ವೈದ್ಯಕೀಯ, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕ ಹಚ್ಚಳವಾಗುತ್ತದೆ ಎಂಬ ಆತಂಕದಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರು ನೆಮದಿಯ ನಿಟ್ಟುಸಿರು ಬಿಡುವಂತಾಗಿದೆ.