ಮಂಡ್ಯ: ಶ್ರೀರಂಗಪಟ್ಟಣದ ಆರತಿ ಉಕ್ಕಡ ದೇವಾಲಯದಲ್ಲಿದ್ದ ಕರ್ತವ್ಯ ನಿರತ ಮಹಿಳಾ ಸಬ್ ಇನ್ಸ್ಪೆಕ್ಟರ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ತುಮಕೂರು ಶಾಸಕ ಸುರೇಶ್ಗೌಡ ಪುತ್ರಿ, ಐಶ್ವರ್ಯಾ (Aishwarya) ಗೆ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ಜಾಮೀನು ಕೋರಿ ಐಶ್ವರ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಶ್ರೀರಂಗಪಟ್ಟಣದ 3ನೇ ಅಪರ ಸತ್ರ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿ ಅರ್ಜಿ ವಜಾ ಮಾಡಿ ಆದೇಶಿಸಿದೆ.