ದಾರಿಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್​ ಅಪಘಾತ: ಸ್ಥಳದಲ್ಲೇ ASI ದುರ್ಮರಣ! Bike Accident

ಪರಶುರಾಮಪುರ ಠಾಣೆಯ ಎಎಸ್​ಐ ಮಂಜುನಾಥ್
ಪರಶುರಾಮಪುರ ಠಾಣೆಯ ಎಎಸ್​ಐ ಮಂಜುನಾಥ್
Published on

ಪ್ರಮುಖ ಮುಖ್ಯಾಂಶಗಳು

  • ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಹಾಯಕ ಸಬ್​ ಇನ್ಸ್​ಪೆಕ್ಟರ್​ ದುರ್ಮರಣ
  • ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಕ್ರಾಸ್ ಬಳಿ ನಡೆದ ದುರ್ಘಟನೆ
  • ಮಂಜುನಾಥ್​ ಅವರ ಜೊತೆ ಇದ್ದ ಪೊಲೀಸ್​ ಕಾನ್ಸ್​ಟೆಬಲ್​ ಸೂರ್ಯಪ್ರಭಾಗೆ ಗಂಭೀರ ಗಾಯ
ಚಿತ್ರದುರ್ಗ: ದಾರಿಗೆ ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಹಾಯಕ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಬೈಕ್​ ಅಪಘಾತದಲ್ಲಿ ( Bike Accident ) ದುರಂತ ಸಾವಿಗೀಡಾಗಿದ್ದಾರೆ.
ಮೃತರನ್ನು ಮಂಜುನಾಥ್​ (50) ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಕ್ರಾಸ್ ಬಳಿ ನಡೆದಿದೆ.
ಮಂಜುನಾಥ್​​ ಅವರು ಪರಶುರಾಮಪುರ ಠಾಣೆಯಲ್ಲಿ ಎಎಸ್​ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಐಮಂಗಲ ಪೊಲೀಸ್ ತರಬೇತಿ ಶಾಲೆಯಿಂದ ಹಿಂತಿರುಗುವಾಗ ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ. ಈ ವೇಳೆ ಮಂಜುನಾಥ್​ ಸ್ಥಳದಲ್ಲೇ ಸಾವಿಗಿಡಾಗಿದ್ದಾರೆ.
ಮಂಜುನಾಥ್​ ಅವರ ಜೊತೆ ಇದ್ದ ಪೊಲೀಸ್​ ಕಾನ್ಸ್​ಟೆಬಲ್​ ಸೂರ್ಯಪ್ರಭಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳು ಸೂರ್ಯಪ್ರಭಾ ಅವರು ಮೃತ ಮಂಜುನಾಥ ಸಹೋದರಿ. ಮಂಜುನಾಥ್​ ಅವರನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
ಅಪಘಾತ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net