ಜೂ.5ರಂದು ಬೈಕ್​ ಜಾಥಾ Bike rally

ಜೂ.5ರಂದು ಬೈಕ್​ ಜಾಥಾ Bike rally
ಜೂ.5ರಂದು ಬೈಕ್​ ಜಾಥಾ Bike rally
Published on
ಮುಳಬಾಗಿಲು: ಕೈಗಾರಿಕೆಗಳ ಸ್ಥಾಪನೆ ನೆಪದಲ್ಲಿ ರೈತರ ಜಮೀನುಗಳನ್ನು ಕಬಳಿಕೆ ಮಾಡುತ್ತಿರುವುದನ್ನು ವಿರೋಧಿಸಿ ಜೂ.5ರಂದು ಬೈಕ್​ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂ ಹಾಗೂ ಹಸಿರುಸೇನೆ ಕೋಡಿಹಳ್ಳಿ ಚಂದ್ರಶೇಖರ್​ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ವೀರಭದ್ರಸ್ವಾಮಿ ಹೇಳಿದರು.Bike rally
ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂ ಹಾಗೂ ಹಸಿರುಸೇನೆ ಕೋಡಿಹಳ್ಳಿ ಚಂದ್ರಶೇಖರ್​ ಬಣದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಿತ್ತಿಪತ್ರ ಬಿಡುಗಡೆ ಮಾಡಿ ಮಾತನಾಡಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲ ಕಡೆಗಳಲ್ಲಿ ಕೈಗಾರಿಕೆ ನಿರ್ಮಾಣ ಮಾಡುವ ನೆಪದಲ್ಲಿ ರೈತರ ಜಮೀನುಗಳನ್ನು ಅತಿಕ್ರಮಣ ಮಾಡಲಾಗುತ್ತಿದೆ. ಇದನ್ನು ವಿರೋಧಿಸಿ ನಮ್ಮ ಸಂದಿಂದ ನಿರಂತರವಾಗಿ ಹೋರಾಟವನ್ನು ನಡೆಸಲಾಗುತ್ತಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರ ನೀಡಬೇಕೆಂದು ಕೋರಿದರು.
ಈಗಾಗಲೇ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಭೂಮಿ ಒತ್ತುವರಿ ಪ್ರಕರಣಗಳಿಂದ ರೈತರು ಮಾನಸಿಕ ಒತ್ತಡಕ್ಕೆ ಸಿಲುಕಿದ್ದಾರೆ. ಆದ್ದರಿಂದ ರೈತರು ಮುಂದಿನ ದಿನಗಳಲ್ಲಿ ಅನಾಹುತಕ್ಕೆ ಸಿಲುಕುವುದಕ್ಕೂ ಮೊದಲೇ ಎಚ್ಚೆತ್ತುಕೊಂಡು ಈ ಸಮಸ್ಯೆ ಪರಿಹರಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ಉಪಾಧ್ಯ ತಾತಿಕಲ್ಲು ಸುರೇಶ್​, ಪ್ರಧಾನ ಕಾರ್ಯದರ್ಶಿ ರಾಂಬಾಬು, ಕಾರ್ಯದರ್ಶಿ ಸೋಮಶೇಖರ್​, ಕೆ.ವಿ.ಗಂಗಾಧರ, ಜೆಸಿಬಿ ರಮೇಶ್​, ನಾಗರಾಜಪ್ಪ, ಸಂತೋಷ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net