ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

ಮಲ್ಲಿಪಟ್ಟಣ ಗ್ರಾಪಂ ಬಿಲ್ ಕಲೆಕ್ಟರ್ ಹರೀಶ್
ಮಲ್ಲಿಪಟ್ಟಣ ಗ್ರಾಪಂ ಬಿಲ್ ಕಲೆಕ್ಟರ್ ಹರೀಶ್
Published on

ಪ್ರಮುಖ ಮುಖ್ಯಾಂಶಗಳು

  • ಮನೆ ಇ ಸ್ವತ್ತು ನೀಡಲು ಲಂಚದ ಬೇಡಿಕೆ
  • ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ಅರಕಲಗೂಡು: ಮನೆ ಇ ಸ್ವತ್ತು ನೀಡಲು ಲಂಚದ ಬೇಡಿಕೆ ಇಟ್ಟಿದ್ದ ಬಿಲ್ ಕಲೆಕ್ಟರ್ ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಮಲ್ಲಿಪಟ್ಟಣ ಗ್ರಾಪಂ ಬಿಲ್ ಕಲೆಕ್ಟರ್ ಹರೀಶ್ ಲೋಕಾಯುಕ್ತ ಬಲೆಗೆ ಬಿದ್ದವ. ಈತ ಸೋಮಶೇಖರ್ ಎಂಬುವರಿಗೆ ಮನೆ ಇ ಸ್ವತ್ತು ನೀಡಿ 48 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದ. ಈ ಕುರಿತು ಸೋಮಶೇಖರ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲಂಚ ಸ್ವೀಕರಿಸುವ ವೇಳೆ ಹಾಸನ ಲೋಕಾಯುಕ್ತ ಇನ್‌ಸ್ಪೆಕ್ಟರ್ ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿ ಹರೀಶ್ ಎಂಬಾತನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net