

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಎನ್ಡಿಎ ಅಭ್ಯರ್ಥಿ ಶಶೀಲ್ ನಮೋಸಿ ಅವರು ಮತ್ತೊಮ್ಮೆ ಗೆಲುವು ಸಾಧಿಸಿದ್ದು, ಕಾಂಗ್ರೆಸ್ಗೆ ಮುಖಭಂಗವಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ವಿರುದ್ಧ ಶಶೀಲ್ ನಮೋಶಿ ಮೂರನೇ ಬಾರಿ ಗೆಲುವು ಸಾಧಿಸಿದ್ದಾರೆ. ಮೊದಲ ಸುತ್ತಿನ ಪ್ರಥಮ ಪ್ರಾಶಸ್ತ್ಯದ ಮತಗಳ ಎಣಿಕೆಯಲ್ಲಿ ಶಶೀಲ್ ನಮೋಶಿ ಅವರು ಮಟ್ಟೂರು ಅವರಿಗಿಂತ 1,529 ಮತಗಳ ಮುನ್ನಡೆ ಸಾಧಿಸಿದ್ದರು. ಎರಡನೇ ಸುತ್ತಿನಲ್ಲೂ 3 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಮುನ್ನಡೆ ಸಾಧಿಸಿ ಗೆಲುವಿನ ನಗೆ ಬೀರಿದ್ದಾರೆ ಎನ್ನಲಾಗಿದೆ.