ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಬಡವರಿಗಾಗಿ ರೂಪಿಸಿಸಲ್ಪಟ್ಟಿವೆ. ಎಲ್ಲಾ ಜಾತಿ, ಧರ್ಮ, ಭಾಷೆಗಳಿಗೆ ಸೇರಿದ ಜನರಿಗೆ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದು, ಗ್ಯಾರಂಟಿ ಯೋಜನೆಗಳು ಸಾಮಾಜಿಕ ಬದ್ಧತೆಯನ್ನು ಒದಗಿಸುವ ಹೂಡಿಕೆಯಾಗಿದೆ. ಇದೂ ಕೂಡ ಅಭಿವೃದ್ದಿಯೇ ಎಂದರು. ಅಭಿವೃದ್ಧಿಯೆಂದರೆ ಕೇವಲ ರಸ್ತೆ, ಸೇತುವೆ, ಕಟ್ಟಡಗಳು ಮಾತ್ರವಲ್ಲ. ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವುದು ಕೂಡ ಆಗಿದೆ ಎಂದರು.