ಬೆಂಗಳೂರಿನಲ್ಲೂ ಬಿಹಾರ ಮತದಾರರ ಪರ ಪ್ರಚಾರ ಕಾರ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ತೊಡಗಿದ್ದರು. ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘2025ರ ನವೆಂಬರ್ 6 ಮತ್ತು 11 ರಂದು ನಡೆಯಲಿರುವ ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ, ಬೆಂಗಳೂರು ಮತ್ತು ಕರ್ನಾಟಕದಾದ್ಯಂತ ಕೆಲಸ ಮಾಡುತ್ತಿರುವ ಬಿಹಾರದ ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕಂಪನಿಗಳು, ಉದ್ಯಮಿದಾರರು, ಹೋಟೆಲ್‌ಗಳು ಮತ್ತು ಗುತ್ತಿಗೆದಾರರು ಕನಿಷ್ಠ ಮೂರು ದಿನಗಳ ವೇತನ ಸಹಿತ ರಜೆ ನೀಡಿ, ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಹಕರಿಸಬೇಕೆಂದು ವಿನಂತಿ ಮಾಡುತ್ತೇನೆ’ ಎಂದು ಬಹಿರಂಗವಾಗಿ ಕೋರಿದ್ದಲ್ಲದೇ ಸಾಮಾಜಿಕ ಜಾಲತಾಣದಲ್ಲೂ ಪೋಸ್ಟ್ ಮಾಡಿದ್ದರು.