ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಕೇವಲ ಇಬ್ಬರು ಅಭ್ಯರ್ಥಿಗಳನ್ನಷ್ಟೇ ಗೆಲ್ಲಿಸಿಕೊಳ್ಳಬಹುದಾದ ಸಂಖ್ಯಾಬಲ ಹೊಂದಿದ್ದರೂ ಬಿಜೆಪಿ 3ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ದೊಡ್ಡ ಮೊತ್ತದ ಹಣದ ಆಮೀಷ ಒಡ್ಡಿ, ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮೂಲಕ ಕುದುರೆ ವ್ಯಾಪಾರ ನಡೆಸಲು ಬಿಜೆಪಿ ಸಕಲ ತಯಾರಿ ನಡೆಸಿತ್ತು. ಆದರೆ ಕಾಂಗ್ರೆಸ್ ಶಾಸಕರು ಒಗ್ಗಟ್ಟಾಗಿದ್ದರಿಂದ ಬಿಜೆಪಿಯ ಆಟ ನಡೆಯಲಿಲ್ಲ. ಯಾವಾಗ ಕುದುರೆ ವ್ಯಾಪಾರ ವಿಫಲವಾಯಿತೋ, ಆಗ ಕೊನೆಯ ಅಸ್ತ್ರ ಎಂಬಂತೆ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರವೇ ನೇರವಾಗಿ ತಿರಸ್ಕೃತಗೊಳ್ಳುವಂತೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.