ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಬಿಎಲ್ಎ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ 24,782 ಮತದಾರರಿದ್ದು ಇದರಲ್ಲಿ 18810 ಮತದಾರರು ಬಾಕಿ ಉಳಿದಿದ್ದು, ಶೇ.90.81 ರಷ್ಟು ಸಾಧನೆ ಮಾಡಲಾಗಿದೆ. ಮತ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೆೆ ಆ.7ರ ಸಂಜೆ 5 ರವರೆಗೆ ಪಟ್ಟಿಯಲ್ಲಿ ಹೆಸರು ಸೇರಿಸಲು ಅವಕಾಶವಿದೆ. ಯಾರೂ ಸಹ ಮತದಾರರ ಪಟ್ಟಿಯಿಂದ ವಂಚಿತರಾಗಬಾರದೆಂದು ಜಿಲ್ಲಾಧಿಕಾರಿ ಆದೇಶಿಸಿದ್ದು, ಅದರಂತೆ ಪ್ರತಿ ಮನೆಗೆ ಮೂರು ಬಾರಿ ಭೇಟಿ ನೀಡಲು ಬಿಎಲ್‌ಒಗಳಿಗೆ ಸೂಚಿಸಲಾಗಿದೆ. 8402 ಮತದಾರರು ಸ್ಥಳ ಬದಲಾವಣೆ, ಮರಣ, ಎರಡು ಕಡೆ ಪಟ್ಟಿಯಲ್ಲಿರುವುದನ್ನು ಗುರುತಿಸಿ ತೆಗೆಯಲಾಗಿದೆ ಎಂದು ಮಾಹಿತಿ ನೀಡಿದರು.