ಬಿಎಂಶ್ರೀ ದತ್ತಿ ಪ್ರಶಸ್ತಿ ಪ್ರಕಟ

ಲೇಖಕ ಡಾ. ಅಮ್ಮಸಂದ್ರ ಸುರೇಶ್ ಅವರಿಗೆ ಸಾರಂಗಿ ವೆಂಕಟರಾಮಯ್ಯ ಪುಟ್ಟಚ್ಚಮ್ಮ ಸ್ಮಾರಕ ದತ್ತಿ ಪ್ರಶಸ್ತಿ
ಲೇಖಕ ಡಾ. ಅಮ್ಮಸಂದ್ರ ಸುರೇಶ್ ಅವರಿಗೆ ಸಾರಂಗಿ ವೆಂಕಟರಾಮಯ್ಯ ಪುಟ್ಟಚ್ಚಮ್ಮ ಸ್ಮಾರಕ ದತ್ತಿ ಪ್ರಶಸ್ತಿ
Published on

ಪ್ರಮುಖ ಮುಖ್ಯಾಂಶಗಳು

  • ಬಿ.ಎಂ.ಶ್ರೀ ಪ್ರತಿಷ್ಠಾನ
  • ಸಾರಂಗಿ ವೆಂಕಟರಾಮಯ್ಯ ಪುಟ್ಟಚ್ಚಮ್ಮ ಸ್ಮಾರಕ ದತ್ತಿ
  • ಲೇಖಕ ಡಾ. ಅಮ್ಮಸಂದ್ರ ಸುರೇಶ್
ಬೆಂಗಳೂರು: ಪ್ರಥಮ ಮುದ್ರಣವಾಗಿ 2024ರಲ್ಲಿ ಪ್ರಕಟವಾಗಿರುವ ಉತ್ತಮ ಕಾದಂಬರಿಗೆ ಬಿಎಂಶ್ರೀ ಪ್ರತಿಷ್ಠಾನ ನೀಡುವ ‘ಸಾರಂಗಿ ವೆಂಕಟರಾಮಯ್ಯ ಪುಟ್ಟಚ್ಚಮ್ಮ ಸ್ಮಾರಕ ದತ್ತಿ’ ಪ್ರಶಸ್ತಿಗೆ ಲೇಖಕ ಡಾ. ಅಮ್ಮಸಂದ್ರ ಸುರೇಶ್ ಅವರ ‘ಅಗ್ನಿಕುಂಡದಿಂದ ಬಂದ ಚೇತನ’ ಕಾದಂಬರಿ ಆಯ್ಕೆಯಾಗಿದೆ. ದತ್ತಿ ಪ್ರಶಸ್ತಿಯು 3 ಸಾವಿರ ನಗದು ಹಾಗೂ ಅಭಿನಂದನಾ ಪತ್ರವನ್ನು ಒಳಗೊಂಡಿದ್ದು, ಡಿ.23ರಂದು ಬಿಎಂಶ್ರೀ ಪ್ರತಿಷ್ಠಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಡಾ. ಶಾಂತರಾಜು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net