ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009 (ಆರ್ಟಿಇ) ಪ್ರಕಾರ, ಯಾವುದೇ ಮಗುವು ಶಿಕ್ಷಣದಿಂದ ವಂಚಿತವಾಗಬಾರದು. ಪ್ರತಿ ಶೈಕ್ಷಣಿಕ ವರ್ಷದ ಕೊನೆಯಲ್ಲಿ 5 ಮತ್ತು 8ನೇ ತರಗತಿ ಪರೀಕ್ಷೆ ನಡೆಸಬೇಕು. ಮುಖ್ಯ ಪರೀಕ್ಷೆಯಲ್ಲಿ ಮಗುವು ಅನುತ್ತೀರ್ಣರಾದಲ್ಲಿ ಫಲಿತಾಂಶ ಪ್ರಕಟವಾದ 2 ತಿಂಗಳೊಳಗೆ ಪೂರಕ ಪರೀಕ್ಷೆ ನಡೆಸುವ ಮೂಲಕ ಮತ್ತೊಂದು ಅವಕಾಶ ಕಲ್ಪಿಸಬೇಕು. ಪೂರಕ ಪರೀಕ್ಷೆಯಲ್ಲಿಯೂ ಮಗುವು ವಿಫಲವಾದರೆ, ಪ್ರಾಥಮಿಕ ಶಿಕ್ಷಣ ಮುಗಿಯುವವರೆಗೆ ಮಗುವನ್ನು ತಡೆಹಿಡಿಯದಿರಲು ಸರ್ಕಾರವು ಸೂಕ್ತ ಕ್ರಮ ವಹಿಸಬೇಕು.