

ಪ್ರಮುಖ ಮುಖ್ಯಾಂಶಗಳು
ಸಾವಿನಲ್ಲಿ ಸಾರ್ಥಕತೆ ಮೆರೆದ ನಿವೃತ್ತ ಪ್ರಾಧ್ಯಾಪಕ
ವಿಜಯವಾಣಿ ಸುದ್ದಿಜಾಲ ಬೆಳಗಾವಿ:
ಇಲ್ಲಿನ ಶಾಹುನಗರ ನಿವಾಸಿ,ನಿವೃತ್ತ ಪ್ರಾಧ್ಯಾಪಕ ಡಾ.ಶಂಕರ ಗುರುಸಿದ್ದಪ್ಪ ಜಿಗಜಿನ್ನಿ (೮೬) ಇವರು ಈಚೆಗೆ ನಿಧನರಾದರು.
ಮೃತರ ಅಂತಿಮ ಇಚ್ಛೆಯಂತೆ ಬೈಲಹೊಂಗಲ ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಮುಖಾಂತರ ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನ ಮತ್ತು ಸಂಶೋಧನೆಗಾಗಿ ನಗರದ ಕೆಎಲ್‌ಇ ಜವಾಹರಲಾಲ ನೆಹರು ಮೆಡಿಕಲ್ ಕಾಲೇಜಿಗೆ ದೇಹ ದಾನ ಮಾಡಿ ಸಾವಿನಲ್ಲಿ ಸಾರ್ಥಕತೆ ಮೆರೆದಿದ್ದಾರೆ.
ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಡಾ.ಮಹಾಂತೇಶ ರಾಮಣ್ಣವರ ಅವರು ದೇಹದಾನ ಮಾಡಿದ ಜಿಗಜಿನ್ನಿ
ಕುಟುಂಬದ ಸದಸ್ಯರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.ಮೃತರಿಗೆ ಪತ್ನಿ,ಇಬ್ಬರು ಪುತ್ರರು ,ಪುತ್ರಿ ಇದ್ದಾರೆ.