

ದೊಡ್ಡಬಳ್ಳಾಪುರ :
ಭಾಶೆಟ್ಟಿಹಳ್ಳಿ ಪುರಸಭೆಯಲ್ಲಿನ ಭ್ರಷ್ಟಾಚಾರ ತಾಲೂಕಿನ ಇತಿಹಾಸದಲ್ಲಿಯೇ ಈ ಮೊದಲು ನಡೆದಿಲ್ಲ. ನವ ದೊಡ್ಡಬಳ್ಳಾಪುರ ಮಾಡುತ್ತೇವೆ ಎಂದು ಬಂದವರು ಭ್ರಷ್ಟಾಚಾರದಲ್ಲಿ ಮುಳುಗಿ ಬೋಗಸ್ ಬಿಲ್ ಸೃಷ್ಟಿಯಲ್ಲಿ ತಲ್ಲೀನರಾಗಿದ್ದಾರೆ ಎಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಆರೋಪಿಸಿದರು.
ಬಾಶೆಟ್ಟಿಹಳ್ಳಿ ಪಪಂನಲ್ಲಿ ಅವ್ಯವಹಾರ ನಡೆದಿವೆ ಎಂದು ಆರೋಪಿಸಿ ತಾಲೂಕು ಕಾಂಗ್ರೆಸ್ನಿಂದ ಪಪಂ ಕಚೇರಿ ಮುಂಭಾಗ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಶಾಸಕರು, ಪಪಂ ವ್ಯಾಪ್ತಿಯಲ್ಲಿನ ಪಿಜಿ, ಚೌಟ್ರಿ, ಖಾಸಗಿ ಕಂಪನಿಗಳು ಸೇರಿದಂತೆ ಕಮರ್ಷಿಯಲ್ ಕಾಂಪ್ಲೆಕ್ಸ್ಗಳ ಮಾಲೀಕರ ಬಳಿ ತೆರಿಗೆ ವಸೂಲಿ ಮಾಡಿಲ್ಲ. ಕೋಟ್ಯಂತರ ರೂಪಾಯಿ ಅಕ್ರಮ ಅವ್ಯವಹಾರಗಳು ನಡೆದಿವೆ. ಎಲ್ಲವೂ ಕೂಲಂಕೂಷವಾಗಿ ತನಿಖೆಯಾಗಬೇಕು. ಭ್ರಷ್ಟ ಅಧಿಕಾರಿಗಳ ವಿರುದ್ಧ ಸರ್ಕಾರ ಎಸ್ಐಟಿ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳಬೇಕು. ಭ್ರಷ್ಟ ಅಧಿಕಾರಿಗಳು, ರಾಜಕಾರಣಿಗಳು ಜೈಲಿಗೆ ಹೋಗಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಪಪಂ ಕಚೇರಿ ಮುಂದೆ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷಿ$್ಮಪತಿ ಮಾತನಾಡಿ, ಭ್ರಷ್ಟ ಅಧಿಕಾರಿಗಳು, ರಾಜಕಾರಣಿಗಳು ಪಟ್ಟಣ ಪಂಚಾಯಿತಿಯಲ್ಲಿ ಮೀತಿ ಮೀರಿ ಅಕ್ರಮ ಅವ್ಯವಹಾರಗಳಲ್ಲಿ ತೊಡಗಿದ್ದಾರೆ. ಸಿಎ ಸೈಟ್ಗಳನ್ನು ಅಕ್ರಮವಾಗಿ ತಮ್ಮ ಸ್ವಹಿತಾಸಕ್ತಿ ಹಂಚಿಕೆ ಮಾಡಿಕೊಳ್ಳಲು ಹೊರಟಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು 10ದಿನಕ್ಕೂ ಹೆಚ್ಚು ದಿನ ಕಡತ ಪರಿಶೀಲನೆ ಮಾಡಿದ್ದಾರೆ. ಇಲ್ಲಿನ ಬೋಗಸ್ ಬಿಲ್ಗಳನ್ನು ನೋಡಿ ಅವರೇ ಶಾಕ್ಗೆ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಭ್ರಷ್ಟಾಚಾರ ಎಸಗಿರುವ, ಪ್ರೋತ್ಸಾಹ ನೀಡಿರುವ ಎಲ್ಲರಿಗೂ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.