ಬೆಂಗಳೂರಿನ 'ನಮ್ಮ ಮೆಟ್ರೋ' ನಿಲ್ದಾಣಕ್ಕೆ ಬಾಂಬ್ ಬೆದರಿಕೆ! Metro Station Bomb Threat

Metro
Metro
Published on
ಬೆಂಗಳೂರು: ಬಿಎಂಆರ್‌ಸಿಎಲ್‌ಗೆ ( Metro Station Bomb Threat) ಬೆಂಗಳೂರಿನ "ನಮ್ಮ ಮೆಟ್ರೋ" ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಬಂದಿದೆ.
ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ ಬಿಎಂಆರ್‌ಸಿಎಲ್ ಅಧಿಕೃತ ಇಮೇಲ್‌ಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆಯ ಸಂದೇಶ ಕಳುಹಿಸಿದ್ದಾನೆ.
ಇಮೇಲ್‌ನಲ್ಲಿ, ಮೆಟ್ರೋ ಸಿಬ್ಬಂದಿಯಾದ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ನಿಮ್ಮ ಒಂದು ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡಬೇಕಾಗುತ್ತದೆ. ನಾನು ಉಗ್ರಗಾಮಿಯಂತೆ, ಅದರಲ್ಲೂ ಕನ್ನಡಿಗರ ವಿರುದ್ಧ ಎಂದು ಬೆದರಿಕೆ ಹಾಕಲಾಗಿದೆ.
ಬೆಂಗಳೂರಿನ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬಂದಿರುವ ಬೆದರಿಕೆ ಇಮೇಲ್‌ ಒಂದು ಬಿಎಂಆರ್‌ಸಿಎಲ್‌ನಲ್ಲಿ ಆತಂಕ ಸೃಷ್ಟಿಸಿದೆ.
ಮೇಲ್ ಪರಿಶೀಲಿಸಿದ ಬಳಿಕ ಬಿಎಂಆರ್‌ಸಿಎಲ್ ಅಧಿಕಾರಿ ತಕ್ಷಣವೇ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net