ರಾಮನಗರ ಜಿಲ್ಲಾ ಕೋರ್ಟ್‌ಗೆ ಬಾಂಬ್ ಬೆದರಿಕೆ: 12 ಆರ್‌ಡಿಎಕ್ಸ್ ಇಟ್ಟು ಸ್ಫೋಟಿಸುವುದಾಗಿ ಸಂದೇಶ | Ramanagara Court

ರಾಮನಗರದ ಜಿಲ್ಲಾ ನ್ಯಾಯಾಲಯ
ರಾಮನಗರದ ಜಿಲ್ಲಾ ನ್ಯಾಯಾಲಯ
Published on
ರಾಮನಗರ: ನಗರದ ಬೆಂಗಳೂರು ದಕ್ಷಿಣ ಜಿಲ್ಲಾ ನ್ಯಾಯಾಲಯವನ್ನು(Ramanagara Court) ಆರ್‌ಡಿಎಕ್ಸ್ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತನಿಂದ ಸೋಮವಾರ ಇ-ಮೇಲ್ ಸಂದೇಶ ಬಂದಿದ್ದು, ಕೋರ್ಟ್ ಆವರಣದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಮಧ್ಯಾಹ್ನ 12.35ರ ಸುಮಾರಿಗೆ ಕೋರ್ಟ್‌ನಲ್ಲಿ 12 ಆರ್‌ಡಿಎಕ್ಸ್ ಬಾಂಬ್ ಇಟ್ಟಿರುವುದಾಗಿ ಇಮೇಲ್ ಸಂದೇಶ ಬಂದಿರುವುದನ್ನು ಗಮನಿಸಿದ ನ್ಯಾಯಾಧೀಶರು, ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ತಂದಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ನ್ಯಾಯಾಲಯಕ್ಕೆ ಬಂದು, ಕೋರ್ಟ್ ಒಳಗಡೆ ಇದ್ದ ನ್ಯಾಯಾಧೀಶರು, ಸಿಬ್ಬಂದಿ, ವಕೀಲರು ಹಾಗೂ ಸಾರ್ವಜನಿಕರನ್ನು ಹೊರಕ್ಕೆ ಕಳುಹಿಸಿ, ಕೋರ್ಟ್ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳನ್ನು ತೆರವುಗೊಳಿಸಿದರು. ಅಷ್ಟೊತ್ತಿಗೆ ಸ್ಥಳಕ್ಕೆ ಬಾಂಬ್ ಪತ್ತೆ ದಳ ಮತ್ತು ಶ್ವಾನದಳದ ಸಿಬ್ಬಂದಿ ಬಂದು, ಬಾಂಬ್ಗಾಗಿ ಶೋಧ ಕಾರ್ಯಾಚರಣೆ ನಡೆಸಿದರು. ಇನ್ನು ಬಾಂಬ್ ಇಟ್ಟಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ಕೋರ್ಟ್ ಹೊರಭಾಗದಲ್ಲಿ ಜಮಾಯಿಸಿದರು. ಸ್ಥಳಕ್ಕೆ ಬಂದು ಹೋಗುತ್ತಿದ್ದ ಪೊಲೀಸ್ ಸಿಬ್ಬಂದಿಯನ್ನು ಆತಂಕದಿಂದ ವೀಕ್ಷಿಸುತ್ತಿದ್ದರು.

ಇಡಬ್ಲ್ಯೂಎಸ್ ಮೀಸಲಾತಿ ವಿರೋಧಿಸಿ ಕೃತ್ಯ

ಇಮೇಲ್ ಬೆದರಿಕೆ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್​ ನ್ಯಾಯಾಧೀಶ ಎಂ.ಎಚ್.ಅಣ್ಣಯ್ಯನವರ, ಮಧ್ಯಾಹ್ನ 12.45ಕ್ಕೆ ಇಮೇಲ್ ಬಂದಿದ್ದನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದೆವು. ತಮಿಳುನಾಡಿನಲ್ಲಿ ಇಡಬ್ಲ್ಯೂಎಸ್ ಮೀಸಲಾತಿ ಜಾರಿ ವಿರೋಧಿಸಿ ಬಾಂಬ್ ಇರಿಸಲಾಗಿದೆ ಎಂದು ಇಮೇಲ್ನಲ್ಲಿ ಬರೆಯಲಾಗಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net