ಹುಕ್ಕೇರಿ : ಘಟಪ್ರಭಾ ನದಿಯ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಹುಕ್ಕೇರಿ ತಾಲ್ಲೂಕಿನ ಹಳೆ ಗುಡಗನಟ್ಟಿ ಗ್ರಾಮದಲ್ಲಿ ನಡೆದಿದೆ. ನಡೆಸಿದೆ.
ದಾದಾದಬಾನಟ್ಟಿ ಗ್ರಾಮದ ಕೃಷ್ಣ ವಿಠ್ಠಲ್ ಖಾನಾಪುರಿ (14) ಮತ್ತು ಪ್ರಜ್ವಲ್ ಗೋಕಾರ್ (13) ಮೃತ ದುರ್ದೈವಿಗಳು. ಐವರು ಶಾಲೆಗೆ ರಜೆ ಇದ್ದ ಕಾರಣ ಸಮೀಪ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಈಜಲು ಹೋದಾಗ ನದಿ ನೀರಿನ ಸೆಳೆತಕ್ಕೆ ಸಿಕ್ಕು ಅವಘಡ ಸಂಭವಿಸಿದೆ.
ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.