ಕಲಬುರಗಿ: ಮಂತ್ರಿ ಸ್ಥಾನದಿಂದ ವಂಚಿತರಾಗಿರುವ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರು ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಸಲ್ಲಿಸಿದ್ದಾರೆ. ನಾಲ್ಕು ಸಲ ಶಾಸಕ, ವಿಧಾನ ಪರಿಷತ್ ಸದಸ್ಯ, ಉಪ ಸಭಾಪತಿಯಾಗಿ ಕೆಲಸ ಮಾಡಿದ್ದಾರೆ. ಆಳಂದ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಬಿ.ಆರ್.ಪಾಟೀಲ್ ಅವರಿಗೆ ಸಚಿವ ಸಂಪುಟ ವಿಸ್ತರಣೆ ಹೊತ್ತಿನಲ್ಲಿ ಸ್ಥಾನ ನೀಡುವ ಭರವಸೆ ನೀಡಲಾಗಿತ್ತು. ಆದರೆ ಕೊನೆ ಳಿಗೆಯಲ್ಲಿ ತಮ್ಮನ್ನು ಕೈಬಿಟ್ಟಿರುವುದರಿಂದ ತೀವ್ರ ನೋವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ಬೆಂಬಲಿಗರಲ್ಲಿ ತೀವ್ರವಾದ ಕುದಿಮೌನ ಆವರಿಸಿದ್ದು, ತಮ್ಮ ಶಾಸಕರ ಹೆಸರಿಗೆ ಧಕ್ಕೆ ಆಗಬಾರದು ಎಂದು ಬೀದಿಗೀಳಿಯುವುದು ಬಿಟ್ಟಿದ್ದಾರೆ.