ನೆಲಮಂಗಲದ ಅರಿಶಿನಕುಂಟೆ ಹಾಲಿಡೇ ಾಮ್ರ್ ಹೋಟೆಲ್ ಸಭಾಂಗಣದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ಚೌಧರಿ, ಮಾಜಿ ಶಾಸಕ ಎಂ.ವಿ.ನಾಗರಾಜು, ನೆ.ಯೋ.ಪ್ರಾಧಿಕಾರ ಮಾಜಿ ಅಧ್ಯಕ್ಷ ಎಸ್.ಮಲ್ಲಯ್ಯ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ.ಬೃಂಗೇಶ್, ಬಿಜೆಪಿ ತಾಲೂಕು ಉಪಾಧ್ಯಕ್ಷ ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಸತೀಶ್ ಇದ್ದರು.
ನೆಲಮಂಗಲ : ಚಿತ್ರದುರ್ಗದಲ್ಲಿ ನಡೆಯುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ಬದುಕಿನಲ್ಲಿ 50 ವರ್ಷ ಪೂರೈಸಿದ್ದ ಹಿನ್ನೆಲೆ ಆಯೋಜಿಸಿರುವ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ೇತ್ರದಿಂದ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ಚೌಧರಿ ತಿಳಿಸಿದರು.
ನಗರದ ಅರಿಶಿನಕುಂಟೆಯ ಹಾಲಿಡೇ ಾಮ್ರ್ ಹೋಟೆಲ್ ಸಭಾಂಗಣದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿ, ಯಡಿಯೂರಪ್ಪ ಅವರ ಗರಡಿಯಲ್ಲಿ ಬೆಳೆದ ಅನೇಕರು ರಾಜ್ಯ, ರಾಷ್ಟ್ರಮಟ್ಟದಲ್ಲಿ ನಾಯಕರಾಗಿದ್ದಾರೆ. ಬಿಎಸ್ವೈ ರಾಜ್ಯದಲ್ಲಿ ಬಿಜೆಪಿ ಕಟ್ಟುವಲ್ಲಿ ಮುಂಚೂಣಿಯಲ್ಲಿದ್ದವರು. 2007ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿ 4 ಬಾರಿ ಮುಖ್ಯಮಂತ್ರಿಯಾಗಿ ಸಾಕಷ್ಟು ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ. ರಾಜ್ಯದಲ್ಲಿ ಯಡಿಯೂರಪ್ಪ ಕೇವಲ ವ್ಯಕ್ತಿಯಲ್ಲ ಒಂದು ಶಕ್ತಿಯಾಗಿದ್ದಾರೆ ಎಂದರು.
ಸಕಲ ಸಿದ್ಧತೆ: ಮೇ 9ರಂದು ಚಿತ್ರದುರ್ಗದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತಾಲೂಕಿನಿಂದ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ತೆರಳಿಲಿದ್ದು, 50ಕ್ಕೂ ಹೆಚ್ಚು ಬಸ್ ವ್ಯವಸ್ಥೆ ಮಾಡಲಾಗಿದೆ. ನೆ.ಯೋ.ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಮಲ್ಲಯ್ಯ ಮಾತನಾಡಿ, ರಾಜ್ಯದ ತಳಮಟ್ಟದ ಸಂಟನೆಯಲ್ಲಿ ಯಡಿಯೂರಪ್ಪ ಅವರ ಕೊಡುಗೆ ಅಪಾರ ಎಂದು ಹೇಳಿದರು.
ರಂಗನಾಥ್ಬಾಬು, ಮಹಿಳಾ ಮೋರ್ಚಾ ಅಧ್ಯೆ ಮಂಜುಳಾ ಸುರೇಶ್, ಮುಖಂಡ ಉಮೇಶ್, ಅಶ್ವತ್ಥ್, ಗಿರೀಶ್, ಮಂಜುನಾಥ್, ಅರುಣ್ಗೌಡ, ರಾಜಮ್ಮ ಪ್ರಕಾಶ್, ವೇದಾವತಿ, ಮಂಜುಳಾ, ಶಾಂತಕುಮಾರಿ, ಮಂಜಮ್ಮ ಇತರರು ಇದ್ದರು.