ಬೌದ್ಧ ಸ್ತೂಪ, ಅಶೋಕನ ಶಿಲಾಕೃತಿ ವೀಕ್ಷಣೆ

ಕಲಬುರಗಿ ಜಿಲ್ಲೆಯ ಚಿತ್ತಾಪೂರ್​ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಇಕ್ರಮ್​ ಶರೀಫ್​ ಅವರು ಆಸ್ಪತ್ರೆಯಲ್ಲಿನ ವ್ಯವಸ್ಥೆ ಕುರಿತು ರೋಗಿಗಳಿಂದ ಮಾಹಿತಿ ಪಡೆದರು. ಪ್ರೊಬೇಷನರ್​ ಐಎಎಸ್​ ಅಧಿಕಾರಿ ಶಿಖರ ಮೋಘಾ, ತಹಶೀಲ್ದಾರ್​ ನಾಗಯ್ಯ ಹಿರೇಮಠ್​, ಸಹಾಯಕ ಆಯುಕ್ತ ಪ್ರಭುರೆಡ್ಡಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಕನಗನಹಳ್ಳಿಗೆ ಜಿಲ್ಲಾಧಿಕಾರಿ ಭೇಟಿ
ಕಲಬುರಗಿ: ಜಿಲ್ಲಾಧಿಕಾರಿ ಇಕ್ರಮ ಶರೀಫ್​ ಅವರು ಚಿತ್ತಾಪುರ ತಾಲೂಕಿನ ಐತಿಹಾಸಿಕ ಕನಗನಹಳ್ಳಿಗೆ ಗುರುವಾರ ಭೇಟಿ ನೀಡಿ ಬೌದ್ಧ ಸ್ತೂಪ ಮತ್ತು ಸಾಮ್ರಾಟ್​ ಅಶೋಕನ ಶಿಲಾಕೃತಿ ವೀಸಿದರು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಚಿತ್ತಾಪುರ ಪಟ್ಟಣದಲ್ಲಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ರೋಗಿಗಳ ಯೋಗೇಮ ವಿಚಾರಿಸಿದರು. ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಸೇವೆ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದರು. ತಾಲೂಕಾ ಕ್ರೀಡಾಂಗಣಕ್ಕೂ ಭೇಟಿ ನೀಡಿ ಕ್ರೀಡಾ ಚಟುವಟಿಕೆ ಮತ್ತು ಪ್ರಗತಿ ಕುರಿತು ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು.
ಸೇಡಂ ತಾಲೂಕಿನ ಮಳಖೇಡ ಕೋಟೆಗೆ ಭೇಟಿ ನೀಡಿ, ಅದರ ಸಂರಕ್ಷಣೆ ಕುರಿತು ಪ್ರವಾಸೋದ್ಯಮ ಇಲಾಖೆ ಮತ್ತು ಕರ್ನಾಟಕ ಪುರಾತತ್ವ ಮತ್ತು ಪರಂಪರೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಪ್ರೊಬೇಷನರ್​ ಐಎಎಸ್​ ಅಧಿಕಾರಿ ಶಿಖರ ಮೋಘಾ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ ಬೇಬಿ ಮೊಗೇರ್​, ಸಹಾಯಕ ಆಯುಕ್ತ ಪ್ರಭುರೆಡ್ಡಿ, ಸೇಡಂ ತಹಶೀಲ್ದಾರ ಶ್ರೇಯಾಂಕಾ ಧನಶ್ರೀ, ಚಿತ್ತಾಪುರ ತಹಶೀಲ್ದಾರ್​ ನಾಗಯ್ಯ ಹಿರೇಮಠ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net