ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕಾತಿ ಪರೀಕ್ಷಾ ಪ್ರಕ್ರಿಯೆಯನ್ನು ಕೈಗೊಂಡಿತ್ತು. ಈ ಪ್ರಕ್ರಿಯೆಯಲ್ಲಿ ಶೇ.25ರಷ್ಟು ಹೆಚ್ಚುವರಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಲಾಗಿತ್ತು. ಅದರಂತೆ, ಕಲ್ಯಾಣ ಅಧಿಕಾರಿಗಳ 3 ಹುದ್ದೆ, ಕ್ಷೇತ್ರ ನಿರೀಕ್ಷಕ-15, ಪ್ರಥಮ ದರ್ಜೆ ಸಹಾಯಕ-3 ಮತ್ತು 25 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಮಂಗಳವಾರ (ಸೆ.1) ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.