ಸೋಮವಾರಪೇಟೆ: ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಗುರುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಘಟಕದಲ್ಲಿದ್ದ ಡಿಫಿಬ್ರಿಲೇಟರ್ ಸುಟ್ಟು ಕರಕಲಾಗಿದೆ.
ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ಅಲ್ಲಿದ್ದ ಆಸ್ಪತ್ರೆ ಸಿಬ್ಬಂದಿ ತಕ್ಷಣ ಮೇನ್ ಸ್ವಿಚ್ ಆಫ್ ಮಾಡುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.
ಘಟನೆ ನಡೆದ ಸಂದರ್ಭದಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಯಾವುದೇ ರೋಗಿಗಳು ಇರಲಿಲ್ಲ. ಬೆಂಕಿಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.