ದೊಡ್ಡಬಳ್ಳಾಪುರ : ಮಾಕಳಿ ರೈಲ್ವೆ ನಿಲ್ದಾಣ ಬಳಿಯ ತಿರುವಿನಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಶುಕ್ರವಾರ ಮುಂಜಾನೆ ಕಾರ್ಮಿಕರಿದ್ದ ಬಸ್ ಡಿಕ್ಕಿಯಾಗಿ ಚಾಲಕ ಸೇರಿ 10 ಮಂದಿ ಗಾಯಗೊಂಡಿದ್ದಾರೆ. ಗೌರಿಬಿದನೂರಿನಿಂದ ಖಾಸಗಿ ಕಾರ್ಖಾನೆಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ಮುಂಜಾನೆ ಮಂಜಿನಿಂದ ರಸ್ತೆ ಕಾಣದೆ ಅಪಘಾತ ಸಂಭವಿಸಿದೆ. ಚಾಲಕನ ಕಾಲಿಗೆ ಗಂಭೀರ ಪೆಟ್ಟಾಗಿದ್ದು, 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.