ದೆಹಲಿಗೆ ಪ್ರಯಾಣ ಬೆಳೆಸುವ ಮೊದಲು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ, ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು ಆತುರದಲ್ಲಿದ್ದೀರಿ ಎಂದರು. ಇಂದು ದೆಹಲಿಯಲ್ಲಿ ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ಹೇಳಿದರು.