ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, 2024-25ನೇ ಆರ್ಥಿಕ ವರ್ಷದಲ್ಲಿ ಗೃಹಲಕ್ಷ್ಮಿಯರಿಗಾಗಿ ಬಜೆಟ್‌ನಲ್ಲಿ 28,608.40 ಕೋಟಿ ರೂ. ಅನುದಾನ ಕಾಯ್ದಿರಿಸಲಾಗಿತ್ತು. ಈ ಸರ್ಕಾರ ಇಡೀ ವರ್ಷದಲ್ಲಿ ವಿತರಿಸಿರುವುದು 10 ಕಂತು ಮಾತ್ರ. ಫೆಬ್ರವರಿ ಮತ್ತು ಮಾರ್ಚ್ 2025ರ 2 ಕಂತು ಹಣ ಫಲಾನುಭವಿಗಳಿಗೆ ತಲುಪಿಯೇ ಇಲ್ಲ. ಮಹಿಳೆಯರ ಕಲ್ಯಾಣ ನಿಧಿಯನ್ನೇ ಲೂಟಿ ಮಾಡಿ ಬರೋಬ್ಬರಿ 5 ಸಾವಿರ ಕೋಟಿ ರೂ. ನಾಪತ್ತೆ ಮಾಡಲಾಗಿದೆ. ಇದು ಕೇವಲ ತಾಂತ್ರಿಕ ಲೋಪವಲ್ಲ. ಗ್ಯಾರಂಟಿ ಹೆಸರಿನಲ್ಲಿ ನಡೆದ ಅತ್ಯಂತ ದೊಡ್ಡ ಆರ್ಥಿಕ ಹಗರಣ ಮತ್ತು ಪ್ರಾಮಾಣಿಕ ತೆರಿಗೆದಾರರ ಹಣಕ್ಕೆ ಎಸಗಿದ ದ್ರೋಹವಾಗಿದೆ ಎಂದು ವಾಗ್ದಾಳಿ ನಡೆಸಿದರು.